ಕರ್ನಾಟಕ ಹೈಕೋರ್ಟ್ 
ರಾಜಕೀಯ

ರಾಜ್ಯಸಭೆ ಚುನಾವಣೆಯಲ್ಲಿ ಬಂಡಾಯ ಶಾಸಕರಿಗೆ ಮತದಾನದ ಅವಕಾಶ ಬೇಡ: ಜೆಡಿಎಸ್ ಶಾಸಕರು

ಪಕ್ಷದಿಂದ ಅಮಾನತುಗೊಂಡಿರುವ 7 ಬಂಡಾಯ ಶಾಸಕರಿಗೆ ಮಾರ್ಚ್ 23 ರಂದು ನಡೆಯುವ ರಾಜ್ಯ ಸಭೆ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶ ...

ಬೆಂಗಳೂರು: ಪಕ್ಷದಿಂದ ಅಮಾನತುಗೊಂಡಿರುವ 7 ಬಂಡಾಯ ಶಾಸಕರಿಗೆ ಮಾರ್ಚ್ 23 ರಂದು ನಡೆಯುವ ರಾಜ್ಯ ಸಭೆ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶ ನೀಡದಂತೆ ನಿರ್ದೇಶನ ನೀಡಬೇಕು ಎಂದು ಇಬ್ಬರು ಜೆಡಿಎಸ್ ಶಾಸಕರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಮಾರ್ಚ್ 23 2018 ರಂದು ವಿಧಾಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್ ಬಂಡಾಯ ಶಾಸಕರಿಗೆ ಮತದಾನಕ್ಕೆ ಅವಕಾಶ ನೀಡದಂತೆ ವಿಧಾನಸಭೆ ಸ್ಪೀಕರ್ ಅವರಿಗೆ ನಿರ್ದೇಶನ ನೀಡಬೇಕೆಂದು ಹೈಕೋರ್ಟ್ ಗೆ ಮನವಿ ಸಲ್ಲಿಸಲಾಗಿದೆ,
ಜಮೀರ್ ಅಹಮದ್ ಖಾನ್, ಎನ್. ಚೆಲುವರಾಯ ಸ್ವಾಮಿ, ಎಚ್.ಸಿ ಬಾಲಕೃಷ್ಣ, ಎ.ಬಿ ರಮೇಶ್ ಬಂಡಿಸಿದ್ದೇಗೌಡ, ಇಕ್ಬಾಲ್ ಅನ್ಸಾರಿ, ಅಖಂಡ ಶ್ರೀನಿವಾಸ ಮೂರ್ತಿ, ಮತ್ತು ಭೀಮಾ ನಾಯಕ್ ಅವರಿಗೆ ಮತದಾನದ ಅವಕಾಶ ನೀಡಬಾರದೆಂದು ಶ್ರವಣಬೆಳಗೊಳ ಶಾಸಕ ಸಿ.ಎನ್ ಬಾಲಕೃಷ್ಣ, ಮುದಿಗೆರೆ ಶಾಸಕ ಬಿ.ಬಿ ನಿಂಗಯ್ಯ ಹೈಕೋರ್ಟ್ ಮೊರೆ ಹೋಗಿದ್ದಾರೆ. ಈ ಸಂಬಂಧ ಜಸ್ಟೀಸ್ ರಾಘವೇಂದ್ರ ಎಸ್ ಚೌಹಾಣ್ ಮಂಗಳವಾರ ಅರ್ಜಿ ವಿಚಾರಣೆ ನಡೆಸಲಿದ್ದಾರೆ.
2016ರ ಜೂನ್ 11 ರಂದು ನಡೆದಿದ್ದ ರಾಜ್ಯಸಭೆ ಚುನಾವಣೆ ವೇಳೆ ಜೆಡಿಎಸ್ ಅಭ್ಯರ್ಥಿ ಎಂ ಪಾರೂಕ್ ಅವರಿಗೆ ಎಲ್ಲಾ ಶಾಸಕರು ಮತ ಚಲಾಯಿಸುವಂತೆ ಪಕ್ಷ ವಿಪ್ ನೀಡಿತ್ತು, ಆದರೆ ವಿಪ್ ಉಲ್ಲಂಘನೆ ಮಾಡಿದ್ದ 7 ಶಾಸಕರು ಬೇರೆ ಪಕ್ಷದ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದರು. ಈ ಹಿನ್ನೆಲೆಯಲ್ಲಿ 7 ಶಾಸಕರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು, 
ಈಗ ಮತ್ತೆ ರಾಜ್ಯಸಭೆ ಚುನಾವಣೆ ಎದುರಾಗಿದ್ದು ಈ 7 ಶಾಸಕರು ಬೇರೆ ಪಕ್ಷಕ್ಕೆ ಮತ ಚಲಾವಣೆ ಮಾಡಲಿದ್ದಾರೆ  ಹೀಗಾಗಿ  ಅವರಿಗೆ ಮತ ಚಲಾಯಿಸದಂತೆ  ಸೂಚನೆ ನೀಡಬೇಕೆಂದು ಮನವಿ ಮಾಡಿದ್ದಾರೆ. 
ಶಾಸಕರ ಸದಸ್ಯತ್ವ ಅನರ್ಹತೆ ಕುರಿತು ಜೆಡಿಎಸ್‌ ಮತ್ತು ಬಂಡಾಯ ಶಾಸಕರ ವಾದ ಮತ್ತು ಪ್ರತಿವಾದ ಸ್ಪೀಕರ್‌ ಕೊಠಡಿಯಲ್ಲಿ ಸುಮಾರು ಒಂದು ಗಂಟೆ ಕಾಲ ನಡೆಯಿತು. ಈ ಸಂಬಂಧ ಸ್ಪೀಕರ್ ಕೋಳಿವಾಡ ಇಂದು ತಮ್ಮ ಆದೇಶ ನೀಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!