ಕಾಂಗ್ರೆಸ್ ಅಭ್ಯರ್ಥಿಗಳು 
ರಾಜಕೀಯ

ರಾಜ್ಯಸಭೆ ಚುನಾವಣೆ: ತೂಗೂಯ್ಯೂಲೆಯಲ್ಲಿದೆ ಕಾಂಗ್ರೆಸ್ 3ನೇ ಅಭ್ಯರ್ಥಿ ಭವಿಷ್ಯ

ರಾಜ್ಯಸಭೆ ಚುನಾವಣೆಯಲ್ಲಿ ಮತ ಚಲಾವಣೆ ಸಂಬಂಧ ಜೆಡಿಎಸ್ ನ 7 ಬಂಡಾಯ ಶಾಸಕರ ಭವಿಷ್ಯ ಇನ್ನೂ ಅನಿಶ್ಚಿತವಾಗಿದೆ, ಆದರೆ ಕಾಂಗ್ರೆಸ್ ತನ್ನ ಮೂರನೇ ...

ಬೆಂಗಳೂರು:  ರಾಜ್ಯಸಭೆ ಚುನಾವಣೆಯಲ್ಲಿ ಮತ ಚಲಾವಣೆ ಸಂಬಂಧ ಜೆಡಿಎಸ್ ನ 7 ಬಂಡಾಯ ಶಾಸಕರ ಭವಿಷ್ಯ ಇನ್ನೂ ಅನಿಶ್ಚಿತವಾಗಿದೆ, ಆದರೆ ಕಾಂಗ್ರೆಸ್ ತನ್ನ ಮೂರನೇ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುವ ತವಕದಲ್ಲಿದೆ. 
ಪಕ್ಷದ ಅಭ್ಯರ್ಥಿ ಬಿ.ಎಂ.ಫಾರೂಕ್‌ ಪರ ತಮ್ಮ ಮೊದಲ ಪ್ರಾಶಸ್ತ್ಯದ ಮತ ಚಲಾಯಿಸಬೇಕು ಎಂದು ವಿಪ್‌ ನೀಡಿದ್ದಾರೆ. ಮಾ.23ರಂದು ಚುನಾವಣೆ ನಡೆಯಲಿದ್ದು, ಜೆಡಿಎಸ್‌ ಅಭ್ಯರ್ಥಿಯಾಗಿ ಬಿ.ಎಂ.ಫಾರೂಕ್‌ ಅವರನ್ನು ಕಣಕ್ಕಿಳಿಸಿದೆ. ಬಂಡಾಯ ಶಾಸಕರು, ಪಕ್ಷೇತರ ಶಾಸಕರು ಮತ್ತು ಇತರೆ ಶಾಸಕರ ಬೆಂಬಲದೊಂದಿಗೆ ತಮ್ಮ ಬೆಂಬಲದೊಂದಿಗೆ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಬಹುದು ಎಂಬ ಲೆಕ್ಕಾಚಾರದಲ್ಲಿ ಅಖಾಡಕ್ಕಿಳಿಸಿದೆ. ಈ ಹಿಂದೆಯೂ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ವಿಪ್‌ ಉಲ್ಲಂಘಿಸಿ ಏಳು ಮಂದಿ ಜೆಡಿಎಸ್‌ ಬಂಡಾಯ ಶಾಸಕರು ಕಾಂಗ್ರೆಸ್‌ಗೆ ಮತ ಚಲಾಯಿಸಿದ್ದರು. ಪರಿಣಾಮ ಪಕ್ಷದ ಅಭ್ಯರ್ಥಿಯಾಗಿದ್ದ ಫಾರೂಕ್‌ ಸೋಲು ಅನುಭವಿಸಬೇಕಾಯಿತು.
ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌ ಅವರು ಸುಲಭವಾಗಿ ಜಯಗಳಿಸಿ ರಾಜ್ಯಸಭೆಗೆ ಮತ್ತೊಮ್ಮೆ ಪ್ರವೇಶಿಸಲಿದ್ದಾರೆ. 
ಕಾಂಗ್ರೆಸ್‌ನ ಮೊದಲ ಎರಡು ಅಭ್ಯರ್ಥಿಗಳು ಯಾವುದೇ ಸಮಸ್ಯೆಯಿಲ್ಲದೇ ಜಯಗಳಿಸಲಿದ್ದಾರೆ.  ಎಲ್ ಹನುಮಂತಯ್ಯ ಮತ್ತು ಸೈಯ್ಯದ್ ನಾಸೀರ್ ಹುಸೇನ್ ಆಯ್ಕೆ ನಿಶ್ಚಿತ, ತನ್ನ ಮೂರನೇ ಅಭ್ಯರ್ಥಿ ಚಂದ್ರಶೇಖರ್ ಅವರನ್ನು ಗೆಲ್ಲಿಸಿಕೊಳ್ಳುವ ತವಕದಲ್ಲಿ ಕಾಂಗ್ರೆಸ್ ಇದೆ, ಆದರೆ 3ನೇ ಅಭ್ಯರ್ಥಿಗೆ 33 ಮತಗಳು ಚಲಾವಣೆಯಾಗುತ್ತಿವೆ ಉಳಿದ ಮತಗಳಿಗಾಗಿ ಕಾಂಗ್ರೆಸ್ ಹರಸಾಹಸ ಮಾಡುತ್ತಿದೆ.  
ಮೂರನೇ ಅಭ್ಯರ್ಥಿಯನ್ನು ಪಕ್ಷದ ಹೆಚ್ಚುವರಿ ಮತಗಳು ಹಾಗೂ ಜೆಡಿಎಸ್‌ ಬಂಡಾಯ ಶಾಸಕರ ಮತಗಳ ಬೆಂಬಲದೊಂದಿಗೆ ಗೆಲ್ಲಿಸುವ ವಿಶ್ವಾಸದಲ್ಲಿ ಕಾಂಗ್ರೆಸ್‌ ಇದೆ.
ಆದರೂ, ಜೆಡಿಎಸ್‌ ಪೈಪೋಟಿ ನೀಡಿದ್ದು, ನಾಲ್ಕನೇ ಸ್ಥಾನಕ್ಕೆ ಜೆಡಿಎಸ್‌-ಕಾಂಗ್ರೆಸ್‌ ನಡುವೆ ಸ್ಪರ್ಧೆ ನಡೆಯಲಿದೆ. ನಾಲ್ಕನೇ ಸ್ಥಾನಕ್ಕೆ ಕಾಂಗ್ರೆಸ್‌ ಅಭ್ಯರ್ಥಿಯೋ ಅಥವಾ ಜೆಡಿಎಸ್‌ ಅಭ್ಯರ್ಥಿಯೋ ಎಂಬುದು ಕುತೂಹಲ ಮೂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ