ಬೆಂಗಳೂರು: "ನನ್ನ ಮಗನಿಗೆ ಮುಂದಿನ ವಿಧಾನಸಭೆ ಚುನಾವಣೆಗೆ ಟಿಕೆಟ್ ನೀಡುವುದು ಬೇಡ" ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಮನವಿ ಮಾಡಿದ್ದಾರೆ.
ತಮ್ಮ ಮಗ ಹರ್ಷ ಮೊಯ್ಲಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೋರಿ ಸಲ್ಲಿಸಿದ್ದ ಮನವಿಯನ್ನು ಸ್ಕ್ರೀನಿಂಗ್ ಕಮಿಟಿಗೆ ಕಳಿಸುವುದು ಬೇಡ ಎಂಡು ಮೊಯ್ಲಿ ಮನವಿ ಮಾಡಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಸಭೆಯಲ್ಲಿ ಪಾಲ್ಗೊಂಡಿದ್ದ ವೀರಪ್ಪ ಮೊಯ್ಲಿ ಸ್ವತಃ ತಮ್ಮ ಮಗ ಹರ್ಷಗೆ ಟಿಕೆಟ್ ನೀಡುವುದು ಬೇಡ ಎಂದು ಮನವಿ ಮಾಡಿದ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಿಂದ ಅವರ ಹೆಸರನ್ನು ಕೈಬಿಡಲಾಗಿದೆ. ಎಂದು ಅವರು ಹೇಳಿದರು.
ಕೆಲ ದಿನಗಳ ಹಿಂದೆ ಕಾಂಗ್ರೆಸ್ ವಿರುದ್ಧವೇ ಟ್ವೀಟ್ ಮಾಡಿದ್ದ ವೀರಪ್ಪ ಮೊಯ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದರು. ಇದು ಪಕ್ಷಕ್ಕೆ ಭಾರೀ ಮುಜುಗರ ತಂದಿತ್ತು. ಇದೀಗ ಮೊಯ್ಲಿ ತಮ್ಮ ಪುತ್ರನಿಗೆ ಟಿಕೆಟ್ ನೀಡುವುಉದು ಬೇಡ ಎಂದು ಮನವಿ ಸಲ್ಲಿಸಿರುವುದು ಅವರ ಮುಂದಿನ ನಡೆಯ ಕುರಿತು ಪ್ರಶ್ನೆ ಹುಟ್ಟು ಹಾಕಿದೆ.
ವೀರಪ್ಪ ಮೊಯ್ಲಿ ಪುತ್ರ ಹರ್ಷ ಮೊಯ್ಲಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು