ಬೆಂಗಳೂರು: ಮತ್ತೊಬ್ಬರು ಕಳುಹಿಸಿದ ಚೀಟಿ ಹಿಡಿದು ಮಾತನಾಡುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ರಾಜಕೀಯದ ಪೂರ್ಣ ಅರಿವಿಲ್ಲ ಅವರು, ಇನ್ನೂ ಅಪ್ರಬುದ್ಧರು ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಟೀಕಿಸಿದ್ದಾರೆ.
ಜೆಡಿಎಸ್ ವಿಕಾಸ ಪರ್ವ ಸಮಾವೇಶದಲ್ಲಿ ಅವರು ಮಾತನಾಡಿದ ಅವರು, ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದು ಅವರು ಲೇವಡಿ ಮಾಡಿದ್ದಾರೆ. ಈಗಾಗಲೇ ಸೋಲಿನ ಭೀತಿಯಿಂದ ಹತಾಶರಾಗಿ ಇಲ್ಲದ ಆರೋಪ ಮಾಡುತ್ತಿದ್ದಾರೆ. ರಾಜ್ಯದ ಜನತೆಯೇ ಅವರ ಆರೋಪಗಳಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದರು.
ರಾಹುಲ್ ಜೆಡಿಎಸ್ ಬಗ್ಗೆ ಆರೋಪಿಸುವ ಮುನ್ನ ದೇಶದಲ್ಲಿ ಕಾಂಗ್ರೆಸ್ ಯಾವ ಸ್ಥಿತಿಯಲ್ಲಿದೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಟೀಕಿಸಿದರು.ಸೋನಿಯಾ ಗಾಂಧಿ ಒಂದೆಡೆ ಜಾತ್ಯತೀತ ಶಕ್ತಿಗಳನ್ನು ಒಗ್ಗೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಮತ್ತೊಂದೆಡೆ ರಾಹುಲ್ ರ ಈ ಮಾತುಗಳು ನಿರಾಸೆ ಹುಟ್ಟಿಸುತ್ತಿವೆ. ಅವರಿನ್ನೂ ಅಪ್ರಬುದ್ಧರು ಎಂದು ಟೀಕಿಸಿದರು.
ಯಾವ ಕಾರಣಕ್ಕೂ ಬಿಜೆಪಿ ಜೊತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ. ಮುಸಲ್ಮಾನರಿಗೆ ದ್ರೋಹ ಮಾಡುವುದಿಲ್ಲ. ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಲು ಯಾರ ಬಾಗಿಲಿಗೂ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಮಾತನಾಡಿ, ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯರ ಪಂಜರದ ಒಳಗಿನ ಗಿಳಿ ಇದ್ದಂತೆ. ಜೆಡಿಎಸ್ ಸಂಘ ಪರಿವಾರದ ಅಂಗ ಎಂಬುದು ಸಿದ್ದರಾಮಯ್ಯ ಹೇಳಿಕೆ. ಅದನ್ನು ರಾಹುಲ್ ಪುನರುಚ್ಚರಿಸಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics