ಮಮತಾ ಬ್ಯಾನರ್ಜಿ 
ರಾಜಕೀಯ

ಕಾಂಗ್ರೆಸ್ ಅಡ್ಜಸ್ಟ್ ಮಾಡಿಕೊಳ್ಳುವ ಅಗತ್ಯ ಇದೆ, ದೇವೇಗೌಡ ಒಳ್ಳೆ ಮನುಷ್ಯ: ಮಮತಾ

ರಾಜ್ಯದಲ್ಲಿ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಇತ್ತೀಚಿಗೆ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್....

ನವದೆಹಲಿ: ರಾಜ್ಯದಲ್ಲಿ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಇತ್ತೀಚಿಗೆ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಜೆಡಿಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಒಬ್ಬ ಒಳ್ಳೆ ಮನುಷ್ಯ ಎಂದಿರುವ ಮಮತಾ, 1996ರಲ್ಲಿ ದೇವೇಗೌಡರ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಬೆಂಬಲ ನೀಡಿದ್ದನ್ನು ನೆನಪಿಸಿಕೊಟ್ಟಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಾಮಾರಸ್ಯದಿಂದ ಇರಬೇಕು ಎಂದು ನಾವು ಬಯಸುತ್ತೇವೆ. ಅವು ಏಕೆ ಬೇರೆಯಾಗಬೇಕು? ಮತ್ತು ಏಕೆ ಬದಲಾಗಬೇಕು? ನನಗೆ ಗೊತ್ತಿಲ್ಲ. ಆದರೆ ಕಾಂಗ್ರೆಸ್ ದೇವೇಗೌಡರನ್ನು ಅಡ್ಜಸ್ಟ್ ಮಾಡಿಕೊಳ್ಳಬೇಕಾದ ಅಗತ್ಯ ಇದೆ. ಇದಕ್ಕಾಗಿ ಕಾಂಗ್ರೆಸ್ ಏನು ಮಾಡಬೇಕು ಅಂತ ನಾನು ಹೇಳುವುದಿಲ್ಲ. ಆದರೆ ಅವರಿ ಒಗ್ಗಟ್ಟಾಗಬೇಕು ಎಂದು ದೀದಿ ಹೇಳಿದ್ದಾರೆ.
ಇತರೆ ಪ್ರತಿಪಕ್ಷಗಳ ಮುಖ್ಯಮಂತ್ರಿಗಳೊಂದಿಗೆ ನೀವು ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತೀರಾ? ಎಂಬ ವರದಿಗಾರರ ಪ್ರಶ್ನೆಗೆ ಪಶ್ಚಿಮ ಬಂಗಾಳ ಸಿಎಂ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.
ಕಳೆದ ಭಾನುವಾರ ಮೈಸೂರಿನಲ್ಲಿ ಕಾಂಗ್ರೆಸ್ ಜನಾರ್ಶೀವಾದ ಯಾತ್ರೆ ಉದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ಜೆಡಿಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಜೆಡಿಎಸ್ ಎಂದರೆ ಜನತಾ ದಳ ಸಂಘ ಎಂದು ಟೀಕಿಸಿದ್ದರು. ಅಲ್ಲದೆ ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ..?

1 ವರ್ಷ ಗ್ಯಾರಂಟಿ ಯೋಜನೆಗಳ ನಿಲ್ಲಿಸಿ, ಹಣವನ್ನು ರೈತರಿಗೆ ನೀಡಿ: ರಾಜ್ಯ ಸರ್ಕಾರಕ್ಕೆ ದಿಂಗಾಲೇಶ್ವರ ಶ್ರೀಗಳ ಆಗ್ರಹ

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ 18 ನಿಮಿಷದಲ್ಲಿ ಜೀವಂತ ಹೃದಯ ಸಾಗಾಟ!