ಸಂಗ್ರಹ ಚಿತ್ರ 
ರಾಜಕೀಯ

ಎಲ್ಲ 224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಅಭ್ಯರ್ಥಿಗಳ ಘೋಷಣೆ: ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ

ಹಾಲಿ ವಿಧಾನಸಭಾ ಚುನಾವಣೆಗೆ ಎಲ್ಲ 224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.

ಬೆಂಗಳೂರು: ಹಾಲಿ ವಿಧಾನಸಭಾ ಚುನಾವಣೆಗೆ ಎಲ್ಲ 224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.
ತೀವ್ರ ಕುತೂಹಲ ಮೂಡಿಸಿರುವ ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಪಕ್ಷಗಳಲ್ಲಿ ಟಿಕೆಟ್ ಹಂಚಿಕೆಯ ಸಿದ್ಧತೆ ಆರಂಭವಾಗಿದೆ. ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಪರಮೇಶ್ವರ ಅವರು, ಕಾಂಗ್ರೆಸ್ ಪಕ್ಷದ ಟಿಕೆಟ್ ಹಂಚಿಕೆ ಸಂಬಂಧ ಬುಧವಾರ ಇಡೀ ದಿನ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಂದು ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರ ಜತೆ ಯಾರಿಗೆ ಟಿಕೆಟ್ ನೀಡಬೇಕು, ಏನೇನು ಸಮಸ್ಯೆ ಇದೆ ಎಂಬ ಬಗ್ಗೆ ಚರ್ಚಿಸುವುದಾಗಿ ಹೇಳಿದರು. ಅಂತೆಯೇ ಕಾಂಗ್ರೆಸ್ ಪಕ್ಷದ ಟಿಕೆಟ್ ಹಂಚಿಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡು 224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಟಿಕೆಟ್ ಘೋಷಣೆ ಮಾಡಲಾಗುವುದು ಎಂದು ವಿವರಿಸಿದರು. 
ಕರ್ನಾಟಕ ವಿಧಾನಸಭಾ ಚುನಾವಣೆ ಒಂದೇ ಹಂತದಲ್ಲಿ ನಡೆಯಲಿದ್ದು, ಮೇ 12ಕ್ಕೆ ಮತದಾನ, ಮೇ 15ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?