ಮಮತಾ ಬ್ಯಾನರ್ಜಿ 
ರಾಜಕೀಯ

ಬಿಜೆಪಿ ವಿರೋಧಿ ಸಂಯುಕ್ತ ರಂಗದಲ್ಲಿ ಕಾಂಗ್ರೆಸ್ ಸೇರ್ಪಡೆ: ಮಮತಾ ನಿಲುವಿಗೆ ಸಿಪಿಐ ಬೆಂಬಲ

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ರಚನೆಯಾಗುತ್ತಿರುವ ಸಂಯುಕ್ತ ರಂಗದಲ್ಲಿ....

ಹೈದರಾಬಾದ್: 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ರಚನೆಯಾಗುತ್ತಿರುವ ಸಂಯುಕ್ತ ರಂಗದಲ್ಲಿ ಕಾಂಗ್ರೆಸ್ ಸೇರಿಸಿಕೊಳ್ಳಬೇಕು ಎಂಬ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿಲುವಿಗೆ ಸಿಪಿಐ ಬೆಂಬಲ ನೀಡಿದೆ.
ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ತೃಣಮೂಲ ಕಾಂಗ್ರೆಸ್ ಯತ್ನದ ಬಗ್ಗೆ ಪ್ರತಿಕ್ರಿಯಿಸಿದ ಸಿಪಿಐ ಪ್ರಧಾನ ಕಾರ್ಯದರ್ಶಿ ಸುರವರಮ್ ಸುಧಾಕರ್ ರೆಡ್ಡಿ ಅವರು, ರಾಷ್ಟ್ರಮಟ್ಟದಲ್ಲಿ ಪ್ರತಿಪಕ್ಷಗಳು ಚುನಾವಣಾ ಮೈತ್ರಿ ಮಾಡಿಕೊಳ್ಳುವುದು ಕಷ್ಟ. ಆದರೆ ರಾಜ್ಯಗಳಲ್ಲಿ ಅಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ಬಿಜೆಪಿ ಸೋಲಿಸಲು ಪ್ರಾದೇಶಿಕ ಪಕ್ಷಗಳು ಒಂದಾಗಬಹುದು ಎಂದಿದ್ದಾರೆ.
ನಿನ್ನೆಯಷ್ಟೇ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ಬಿಜೆಪಿ ವಿರುದ್ಧದ ಸಂಯುಕ್ತ ರಂಗದಲ್ಲಿ ಕಾಂಗ್ರೆಸ್ ಸೇರಬೇಕು ಎಂದು ಮನವಿ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!