ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಿದವರು ಪಾತಾಳದಲ್ಲಿದ್ದರೂ ಬಿಡೆವು: ಅಮಿತ್ ಶಾ

ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರನ್ನು ಹತ್ಯೆ ಮಾಡಿದ....

ಅಮಿತ್ ಶಾ
Lingaraj Badiger
Updated On : 30 Mar 2018, 3:57 am
ಮೈಸೂರು: ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರನ್ನು ಹತ್ಯೆ ಮಾಡಿದ ಆರೋಪಿಗಳು ಪಾತಾಳದಲ್ಲಿದ್ದರೂ ಬಿಡುವುದಿಲ್ಲ. ಕೊಲೆಗಡುಕರನ್ನು  ಬಂಧಿಸಿ ಶಿಕ್ಷಿಸಲಾಗುವುದು ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಶುಕ್ರವಾರ ಗುಡುಗಿದ್ದಾರೆ.
ಎರಡು ದಿನಗಳ ಚುನಾವಣಾ ಪ್ರವಾಸದಲ್ಲಿರುವ ಅಮಿತ್ ಶಾ ಅವರು ಇಂದು ಮೈಸೂರು ಅರಮನೆಗೆ ಭೇಟಿ ನೀಡಿ, ರಾಜಮಾತೆ ಪ್ರಮೋದಾದೇವಿ ಒಡೆಯರ್​, ಮಹಾರಾಜ ಯದುವೀರ್​ ಒಡೆಯರ್​ ಜತೆ  ಮಾತುಕತೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಅಧ್ಯಕ್ಷ, ಕಾಂಗ್ರೆಸ್ ಆಡಳಿತದಲ್ಲಿ ನಡೆದ ಬಿಜೆಪಿ ಮತ್ತು ಆರ್ ಎಸ್ಎಸ್ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿದರು. 

Advertisement

Advertisement

ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ಬಿಜೆಪಿ ಮತ್ತು ಆರ್ ಎಸ್ ಎಸ್ ನ 24 ಕಾರ್ಯಕರ್ತರನ್ನು ಕೊಲೆ ಮಾಡಲಾಗಿದೆ. ರಾಜ್ಯದಲ್ಲಿ ಹಿಂಸೆ ಮಿತಿ ಮೀರಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಹಿಂಸೆಯ ಮೂಲಕವೇ ಬಿಜೆಪಿ ವಿಚಾರಧಾರೆಯನ್ನು ಮುಗಿಸಲು ಮುಂದಾಗಿರುವ ಸಿದ್ದರಾಮಯ್ಯ ಅವರ ಪ್ರಯತ್ನ ಫಲಿಸದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಧಾನಸಭೆ ಚುನಾವಣೆಯ ಬಳಿಕ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಈ ಎಲ್ಲ ಪ್ರಕರಣಗಳ ತನಿಖೆ ನಡೆಸಿ ಆರೋಪಿಗಳು ಪಾತಾಳದಲ್ಲಿದ್ದರೂ ಅವರನ್ನು ಶಿಕ್ಷಿಸದೇ ಬಿಡುವುದಿಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement