ಮೃತ ರೈತ ರಾಜೇಂದ್ರಪ್ಪ ಮನೆಗೆ ಭೇಟಿ ನೀಡಿದ ಅಮಿತ್ ಶಾ ಕುಟುಂಬ ವರ್ಗದವರನ್ನು ಸಾಂತ್ವನಪಡಿಸಿದರು. 
ರಾಜಕೀಯ

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರದ ಎಟಿಎಂ: ಅಮಿತ್ ಶಾ

ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಕಾಂಗ್ರೆಸ್ ಪಕ್ಷಕ್ಕೆ ಭ್ರಷ್ಟಾಚಾರದ ಎಟಿಎಂ ಆಗಿದೆ. ಈ ....

ಮೈಸೂರು: ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಕಾಂಗ್ರೆಸ್ ಪಕ್ಷಕ್ಕೆ ಭ್ರಷ್ಟಾಚಾರದ ಎಟಿಎಂ ಆಗಿದೆ. ಈ ರಾಜ್ಯದ ರೈತರ ಆತ್ಮಹತ್ಯೆಯನ್ನು ಪಿತೂರಿ ಎಂದು ಸರ್ಕಾರ ಕರೆದಿರುವುದು ತೀವ್ರ ನೋವುಂಟು ಮಾಡಿದೆ. ಇಷ್ಟು ಸಂವೇದನರಹಿತವಾದ ಸರ್ಕಾರ. ಇಂತಹ ಸರ್ಕಾರವನ್ನು ನಾನು ಇದುವರೆಗೆ ಕಂಡಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಟೀಕಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಕ್ಷೇತ್ರ ಮೈಸೂರಿನಲ್ಲಿ ಇಂದು ಅವರು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ರೈತರ ಆತ್ಮಹತ್ಯೆ ಮತ್ತು ಸಾಮಾನ್ಯ ಜನರ ಸಮಸ್ಯೆಗಳಿಗೆ ಕಾಂಗ್ರೆಸ್ ಪಕ್ಷವೇ ಕಾರಣ. ಒಬಿಸಿ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವ ಮಸೂದೆ ಸಂಸತ್ತಿನ ರಾಜ್ಯಸಭೆಯಲ್ಲಿ ಅಂಗೀಕಾರವಾಗದೆ ಉಳಿದುಕೊಂಡಿದೆ. ಉದ್ದೇಶಪೂರ್ವಕವಾಗಿ ಹಿಂದುಳಿದ ಸಮುದಾಯಕ್ಕೆ ಸಂಬಂಧಪಟ್ಟ ಮಸೂದೆಯನ್ನು ಬಾಕಿ ಉಳಿಸಿದ್ದಕ್ಕೆ ಸಿದ್ದರಾಮಯ್ಯ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷ ಜನರಿಗೆ ಉತ್ತರ ನೀಡಬೇಕಾಗುತ್ತದೆ ಎಂದು ದೂರಿದರು.

ಇದಕ್ಕೆ ಮುನ್ನ ಅವರು ಆತ್ಮಹತ್ಯೆ ಮಾಡಿಕೊಂಡ ರೈತ ರಾಜೇಂದ್ರಪ್ಪ ಮನೆಗೆ ಭೇಟಿ ನೀಡಿದ ಅಮಿತ್ ಶಾ ಮತ್ತು ಇತರ ಬಿಜೆಪಿ ಮುಖಂಡರು ದುಖಿತ ಕುಟುಂಬ ಸದಸ್ಯರಿಗೆ ಸಮಾಧಾನ ಹೇಳಿದರು. ರೈತರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಿದ್ದರಾಮಯ್ಯ ಸರ್ಕಾರ ನಿರಂತರವಾಗಿ ಸೋತಿದೆ ಎಂದು ಟೀಕಿಸಿದರು.

ಇದಕ್ಕೂ ಮುನ್ನ ಅವರು ಹನುಮ ಜಯಂತಿ ಅಂಗವಾಗಿ ಇಂದು ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ ವಿರೋಧಿ ಪ್ರತಿಭಟನೆಗಳಿಗೆ ಅಮೆರಿಕನ್ನರ ಆರ್ಥಿಕ ನೆರವು?'; Mary Millben ಸ್ಫೋಟಕ ಆರೋಪ!

‘ಮೋದಿಗೆ ಅಮೆರಿಕ ಬೇಕಿಲ್ಲ, ಆದರೆ ಅಮೆರಿಕಕ್ಕೆ ಮೋದಿ ಬೇಕು'.. 'ನಿಮ್ಮನ್ನು ಬಳಸಿಕೊಂಡು ಕೈ ಬಿಡುತ್ತಾರೆ': ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಎಚ್ಚರಿಕೆ

CJP ಪ್ರತಿಭಟನೆಯಲ್ಲಿ ಭಾಗಿ: ನಟ Imran Khanಗೆ ಮುಂಬೈ ಪೊಲೀಸರಿಂದ 'Leave India' ನೋಟಿಸ್, ಅ.28ರೊಳಗೆ ಭಾರತ ತೊರೆಯುವಂತೆ ಗಡುವು..!

ಜಿಯೋ - ಸ್ಟಾರ್‌ಲಿಂಕ್‌, ಸ್ಟಾರ್ ವಾರ್ ಹಿಂದಿನ ಆರ್ಥಿಕತೆ! (ಹಣಕ್ಲಾಸು)

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡರೆ ಮೀಸಲಾತಿ ಸೌಲಭ್ಯ ಸಿಗಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!