ಶ್ರೀರಂಗಪಟ್ಟಣದ ಚಿನ್ನೆನಹಳ್ಳಿಯಲ್ಲಿ ಇತ್ತೀಚಿಗೆ ಸಾವನ್ನಪ್ಪಿದ್ದ ರೈತ ರಾಜೇಂದ್ರಪ್ಪ ಕುಟುಂಬ ಸದಸ್ಯರೊಂದಿಗೆ ಅಮಿತ್ ಶಾ ಮಾತುಕತೆಯ ಚಿತ್ರ 
ರಾಜಕೀಯ

ಕರ್ನಾಟಕ ಚುನಾವಣೆ :ಮುಂದಿನ ಐದು ವರ್ಷಗಳ ಕಾಲ ಯಡಿಯೂರಪ್ಪ ಮುಖ್ಯಮಂತ್ರಿ - ಅಮಿತ್ ಶಾ

ಮುಂದಿನ ಐದು ವರ್ಷಗಳ ಕಾಲ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಆಡಳಿತ ಪೂರ್ಣಗೊಳಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಮೈಸೂರು : ಮುಂದಿನ ಐದು ವರ್ಷಗಳ ಕಾಲ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಆಡಳಿತ ಪೂರ್ಣಗೊಳಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನ ತಪ್ಪಿಸುವ ದೃಷ್ಟಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಲಿಂಗಾಯತ , ವೀರಶೈವ ವಿವಾದ ಹುಟ್ಟುಹಾಕಿದ್ದಾರೆ. ಧರ್ಮ, ಜಾತಿಗಳ ಆಧಾರದ ಮೇಲೆ ಸಮಾಜವನ್ನು ಹೊಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕೇಂದ್ರಸರ್ಕಾರ ಕರ್ನಾಟಕಕ್ಕೆ 79,000 ಕೋಟಿ ರೂ ಬಿಡುಗಡೆ ಮಾಡಿದೆ. ಆದರೆ, ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾರ್ಯ ಕೈಗೊಳ್ಳುವಲ್ಲಿ ಹಿಂದೆ ಬಿದ್ದಿದೆ. ಈ ಬಾರಿಯ ಚುನಾವಣೆಗೆ ದಕ್ಷತೆ ಹಾಗೂ ಭ್ರಷ್ಟಾಚಾರ ರಹಿತ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು ಎಂದು ತಿಳಿಸಿದರು.

ಮಂಡ್ಯದಲ್ಲಿ ರೈತ ಮುಖಂಡರಿಂದ ಪ್ರತಿಭಟನೆ ಎದುರಿಸಿದ ಅಮಿತ್ ಶಾ, ರೈತರಿಗಾಗಿ ಕಾಂಗ್ರೆಸ್ ಸರ್ಕಾರ ಏನೂ ಮಾಡಿಲ್ಲ, ಕಳೆದ ಕೆಲ ವರ್ಷಗಳಲ್ಲಿ 3,500 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ರೈತರ ಹಿತಾಸಕ್ತಿ ಕಾಪಾಡುವ ಚುನಾವಣಾ ಪ್ರಣಾಳಿಕೆ ರೂಪಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT