ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಲ್ಲದೇ ಬಿ.ಎಸ್ ಯಡಿಯೂರಪ್ಪ ಪ್ರಚಾರ ನಡೆಸಿದರೇ ಕೇಂದ್ರದ ಹಿರಿಯ ನಾಯಕ ಎಲ್ .ಕೆ ಆಡ್ವಾಣಿ ಅವರ ಸ್ಥಿತಿ ಬರಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಭವಿಷ್ಯ ನುಡಿದಿದ್ದಾರೆ.
ಪ್ರೆಸ್ ಕ್ಲಬ್ ನಲ್ಲಿ ಏರ್ಪಡಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನಸಭೆ ಚುನಾವಣಾ ಫಲಿತಾಂಶ ಬರುತ್ತಿದ್ದಂತೆಯೇ ಬಿಜೆಪಿಯಿಂದ ಯಡಿಯೂರಪ್ಪ ಅವರಿಗೆ ಗೇಟ್ ಪಾಸ್ ನೀಡಲಾಗುತ್ತದೆ. ಆಡ್ವಾಣಿ ಸ್ಥಿತಿಯೇ ಯಡಿಯೂರಪ್ಪ ಅವರಿಗೂ ಬರಲಿದೆ ಎಂದು ಹೇಳಿದ್ದಾರೆ.
ಯಡಿಯೂರಪ್ಪ ಅವರನ್ನು ಪ್ರಧಾನಿ ಮೋದಿ ಅವರ ರ್ಯಾಲಿಗಳಿಂದ ದೂರ ಇಡಲಾಗಿದೆ ಸಂಪೂರ್ಣವಾಗಿ ಯಡಿಯೂರಪ್ಪ ಅವರನ್ನು ನಿರ್ಲಕ್ಷಿಸಲಾಗುತ್ತಿದೆ, ಈ ಮೊದಲು ಮೋದಿ ರಾಜ್ಯದಲ್ಲಿ 15 ದಿನ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿತ್ತು, ಆದರೆ ಈಗ ಏದು 5 ದಿನಗಳಿಗೆ ಇಳಿದಿದೆ. ಹೀಗಾಗಿ ಚುನಾವಣೆಗೂ ಮುನ್ನವೇ ತಾನು ಗೆಲ್ಲುವ ನಂಬಿಕೆ ಕಳೆದುಕೊಂಡಿದೆ ಎಂಬುದನ್ನು ತೋರಿಸಿದೆ ಎಂದು ಟೀಕಿಸಿದ್ದಾರೆ.