ಬೆಂಗಳೂರು: ಕಳೆದ ಹತ್ತು ವರ್ಷಗಳಲ್ಲಿ ಬೆಂಗಳೂರಿನಲ್ಲಿ ಸಾಕಷ್ಟು ಬದಲಾವಣೆಗಳಾಗಿದೆ. ಜನರು ಇತ್ತೀಚೆಗೆ ತಮ್ಮ ಬೇಡಿಕೆಗಳನ್ನು ಮುಕ್ತವಾಗಿ ಹೇಳಿಕೊಳ್ಳುತ್ತಿದ್ದಾರೆ. ನಗರದ ಪರಿಸ್ಥಿತಿ, ಜನಪ್ರತಿನಿಧಿಗಳ ಆಡಳಿತದ ಬಗ್ಗೆ ಜನರು ಹೆಚ್ಚು ಗಮನ ನೀಡುತ್ತಿದ್ದಾರೆ. ಈ ಎಲ್ಲಾ ಅಂಶಗಳು ಮುಂಬರುವ ವಿಧಾನಸಭೆ ಚುನಾವಣೆ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ.
ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುವ ಸಾಧ್ಯತೆಯಿದೆ.
ಮೇ 12ರಂದು ಬೆಂಗಳೂರಿನ ಜನತೆ ತಮ್ಮ ಧ್ವನಿಯನ್ನು ಹೊರಹಾಕಲಿದ್ದಾರೆ.
ಸಮಸ್ಯೆಗಳಿರುವಾಗ ಸ್ಪಂದಿಸದಿರುವ ರಾಜಕೀಯ ಪ್ರತಿನಿಧಿಗಳಿಂದ ಬೇಸತ್ತಿರುವ ಜನರು ಈ ಬಾರಿ ಕಡ್ಡಾಯವಾಗಿ ಮತ ಚಲಾಯಿಸಲು ಮುಂದಾಗಿದ್ದಾರೆ ಎನ್ನುತ್ತಾರೆ ಜಯನಗರ ನಿವಾಸಿ ಅಭಯ್ ಬಿ.ಕೆ.
ಹಿಂದಿನ ಅಂಕಿಅಂಶಗಳಿಗೆ ಹೋಲಿಸಿದರೆ 2008ರಿಂದ 2013ಕ್ಕೆ ಬೆಂಗಳೂರು ನಗರದಲ್ಲಿ ಮತದಾರರ ಸಂಖ್ಯೆ ಶೇಕಡಾ 7.51ರಷ್ಟು ಹೆಚ್ಚಾಗಿದೆ. ಈ ಬಾರಿ ಸಹ ಹಲವು ಸಂಘಟನೆಗಳು ಮತ್ತು ಒಕ್ಕೂಟಗಳು. ನಾವು ಮತದಾನಕ್ಕಾಗಿ ಕಳೆದ ಫೆಬ್ರವರಿಯಿಂದ ಸಿದ್ಧರಾಗುತ್ತಿದ್ದೇವೆ ಎನ್ನುತ್ತಾರೆ ಕೆಂಗೇರಿಯ ನಿವಾಸಿಗಳ ಅಭಿವೃದ್ಧಿ ಒಕ್ಕೂಟದ(ಆರ್ ಡಬ್ಲ್ಯುಎ)ದ ಸದಸ್ಯರೊಬ್ಬರು.
ಬೆಂಗಳೂರು ಗ್ರಾಮಾಂತರ ಪ್ರದೇಶಕ್ಕೆ ಹೋಲಿಸಿದರೆ ಬೆಂಗಳೂರು ನಗರದಲ್ಲಿ ಮತದಾರರ ಸಂಖ್ಯೆ ಕಡಿಮೆಯೆನ್ನಬಹುದು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಶೇಕಡಾ 82ರಷ್ಟು ಮತದಾನವಾಗಿದೆ.