ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆ ರಾಜಕೀಯ ಪಕ್ಷದ ಮುಖಂಡರು ಪ್ರಚಾರ ನಡೆಸುತ್ತಿದ್ದರೆ ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಸೊಸೆ ಸ್ಮಿತಾ ರಾಕೇಶ್ ಮತಯಾಚನೆ ಮಾಡುತ್ತಿದ್ದಾರೆ.
ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಮಿತಾ ರಾಕೇಶ್ ಮನೆ ಮನೆಗೆ ತೆರಳಿ ಮಾವನ ಪರ ಮತಯಾಚನೆ ಮಾಡುತ್ತಿದ್ದಾರೆ.
ಸ್ಮಿತಾ ರಾಕೇಶ್ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಂಚಾರ ಮಾಡುತ್ತಿದ್ದು ಮಾವ ಸಿದ್ದರಾಮಯ್ಯ ಗೆಲುವಿಗೆ ಶ್ರಮಿಸುತ್ತಿದ್ದಾರೆ.
ಮೇ 12ರಂದು ರಾಜ್ಯ ವಿಧಾನಸಭೆಗೆ ಮತದಾನ ನಡೆಯಲಿದ್ದು ಮೇ 15ರಂದು ಅಭ್ಯರ್ಥಿಗಳ ಭವಿಷ್ಯ ತಿಳಿಯಲಿದೆ.