ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಬಿಜೆಪಿ ಪ್ರಣಾಳಿಕೆ: ರೈತರ ಸಾಲ ಮನ್ನಾ, ಪಿಎಫ್ ಐ ನಿಷೇಧ, ಬಿಪಿಎಲ್ ಕಾರ್ಡ್ ದಾರರಿಗೆ ಉಚಿತ ಸ್ಮಾರ್ಟ್ ಫೋನ್ ಭರವಸೆ!

ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಮೇ.04 ರಂದು ಪ್ರಣಾಳಿಕೆ ಬಿಡುಗಡೆ ಮಾಡಿದೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ
Srinivas Rao BV
Updated On : 4 May 2018, 7:37 am
ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಮೇ.04 ರಂದು ಪ್ರಣಾಳಿಕೆ ಬಿಡುಗಡೆ ಮಾಡಿದೆ. 
ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ, ಸಿಎಂ ಅಭ್ಯರ್ಥಿ, ಬಿಎಸ್ ಯಡಿಯೂರಪ್ಪ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಗೋಹತ್ಯೆ ನಿಷೇಧ ಮತ್ತು ಗೋವುಗಳ ಸಂರಕ್ಷಣೆ ಮಸೂದೆ-2012 ನ್ನು ಮತ್ತೆ ವಿಧಾನಸಭೆಯಲ್ಲಿ ಮಂಡಿಸಿ ಜಾರಿಗೆ ತರುವುದು, ರೈತರ, ಕೃಷಿ ಅಭಿವೃದ್ಧಿಗಾಗಿ ಯೋಜನೆಗಳನ್ನು ಜಾರಿಗೆ ತರುವುದೂ ಸೇರಿದಂತೆ  ಹಲವು ಭರವಸೆಗಳನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ. 
ಪ್ರಣಾಳಿಕೆಯ ಮುಖ್ಯಾಂಶಗಳು ಹೀಗಿವೆ:

Advertisement

Advertisement


  • ಅಧಿಕಾರಕ್ಕೆ ಬಂದ ಬೆನ್ನಲ್ಲೇ ಪಿಎಫ್ಐ ಸಂಘಟನೆಯನ್ನು ನಿಷೇಧ
  • ರೈತರ ಸಾಲ ಮನ್ನಾ
  • ರೈತರ ಕಲ್ಯಾಣ ಪಕ್ಷದ ಆದ್ಯತೆಯ ವಿಷಯವಾಗಿದ್ದು, ನೀರಾವರಿ ಯೋಜನೆಗಳಿಗೆ 1,50,000 ಕೋಟಿ ಮೀಸಲು 
  • ಕೃಷಿ ಫೆಲೋಶಿಪ್ ಪಡೆಯಲು ನೆರವಾಗುವ ನಿಟ್ಟಿನಲ್ಲಿ 1000 ಕೃಷಿಕರಿಗೆ ಇಸ್ರೇಲ್ ಪ್ರವಾಸ
  • ರೈತರ ಆದಾಯವನ್ನು ದುಪ್ಪಟ್ಟುಗೊಳಿಸುವ ಮೋದಿ ಕನಸನ್ನು ಸಾಕಾರಗೊಳಿಸಲು ಕ್ರಮ 
  • ತಮಿಳುನಾಡಿನ ಅಮ್ಮಾ ಕ್ಯಾಂಟೀನ್ ಮಾದರಿಯಲ್ಲಿ ಅನ್ನಪೂರ್ಣ ಕ್ಯಾಂಟೀನ್ 
  • ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರ ವಿವಾಹಕ್ಕೆ 25,000 ರೂ ಮೌಲ್ಯದ ಮಂಗಳ ಸೂತ್ರ  
  • ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಉಚಿತ ಸ್ಮಾರ್ಟ್ ಫೋನ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments