ಬೆಂಗಳೂರು: ಆಕ್ಷೇಪಾರ್ಹ ಹೇಳಿಕೆ ಹಾಗೂ ವೈಯಕ್ತಿಕ ನಿಂದನೆ ಮಾಡುತ್ತಿರುವ ಬಿಜೆಪಿ, ಟಿವಿಗಳಲ್ಲಿ ಜಾಹೀರಾತು ಪ್ರಕಟಿಸುತ್ತಿದ್ದು, ಇದಕ್ಕೆ ತೀವ್ರವಾಗಿ ಕಿಡಿಕಾರಿರುವ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿ, ಬಿಜೆಪಿ ವಿರುದ್ಧ ದೂರು ದಾಖಲಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಅಭಿಷೇಖ್ ಸಿಂಘ್ವಿ, ರಾಜೀವ್ ಶುಕ್ಲಾ ಹಾಗೂ ಪ್ರಮೋದ್ ತಿವಾರಿಯವರು ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿದ್ದು, ಬಿಜೆಪಿಯ ಜಾಹೀರಾತುಗಳ ವಿರುದ್ಧ ದೂರು ನೀಡಿದ್ದಾರೆಂದು ತಿಳಿದುಬಂದಿದೆ.
ಕಾಂಗ್ರೆಸ್ ವಿರುದ್ಧ ಬಿಜೆಪಿ ಜಾಹೀರಾತುಗಳನ್ನು ಪ್ರಕಟಿಸುತ್ತಿದ್ದು, ಈ ಜಾಹೀರಾತುಗಳು ಕರ್ನಾಟಕದಲ್ಲಿ ಕೋಮುಸೌಹಾರ್ದತೆ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಹೀಗಾಗಿ ರಾಜ್ಯದಲ್ಲಿ ಪ್ರಸಾರಗೊಳ್ಳುತ್ತಿರುವ ಈ ಜಾಹೀರಾತುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗದ ಬಳಿ ಮನವಿ ಮಾಡಿಕೊಳ್ಳಲಾಗಿದೆ ಎಂದು ಅಭಿಷೇಕ್ ಸಿಂಘ್ವಿಯವರು ಹೇಳಿದ್ದಾರೆ.
ಬಿಜೆಪಿ ನೀತಿ ಸಂಹಿತೆ ಉಲ್ಲಂಘನೆಯಷ್ಟೇ ಅಲ್ಲದೆ, ಕ್ರಿಮಿನಲ್ ದೂರುಗಳನ್ನೂ ಕೂಡ ನೀಡಲಾಗಿದೆ. ಕೂಡಲೇ ಜಾಹೀರಾತುಗಳಿಗೆ ತಡೆ ನೀಡುವಂತೆ ಆಯೋಗದ ಬಳಿ ಮನವಿ ಮಾಡಿಕೊಂಡಿದ್ದೇವೆ. ನಮ್ಮ ದೂರನ್ನು ಆಯೋಗ ತಾಳ್ಮೆಯಿಂದ ಆಲಿಸಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಬಿಜೆಪಿಯ ಜಾಹೀರಾತುಗಳನ್ನು ನೋಡಿದರೆ, ಹತಾಶೆಯಲ್ಲಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics