ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ 
ರಾಜಕೀಯ

ತಂದೆ ಮೇಲೆ ಪ್ರಧಾನಿ ಮೋದಿಗೆ ಇದ್ದಕ್ಕಿದ್ದಂತೆ ಈ ಸಹಾನುಭೂತಿ ಏಕೆ ಗೊತ್ತಿಲ್ಲ: ಹೆಚ್.ಡಿ.ಕುಮಾರಸ್ವಾಮಿ

ತಂದೆ ಹೆಚ್.ಡಿ.ದೇವೇಗೌಡ ಅವರ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿದೆ ಇದ್ದಕ್ಕಿದ್ದಂತೆ ಸಹಾನುಭೂತಿ ಏಕೆ ಬಂತು ಎಂಬುದು ನನಗೂ ಗೊತ್ತಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ...

ವಿಜಯಪುರ: ತಂದೆ ಹೆಚ್.ಡಿ.ದೇವೇಗೌಡ ಅವರ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿದೆ ಇದ್ದಕ್ಕಿದ್ದಂತೆ ಸಹಾನುಭೂತಿ ಏಕೆ ಬಂತು ಎಂಬುದು ನನಗೂ ಗೊತ್ತಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ. 
2015ರ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮೋದಿಯವರು ದೇವೇಗೌಡ ಅವರ ವಿರುದ್ಧ ಮಾತನಾಡಿದ್ದರು. ಬಿಜೆಪಿಯನ್ನು ಜನರು ಗೆಲ್ಲಿಸಿದ್ದೇ ಆದರೆ, ದೇವೇಗೌಡ ಅವರನ್ನು ವೃದ್ಧಾಶ್ರಮಕ್ಕೆ ಕಳುಹಿಸುವುದಾಗಿ ಹೇಳಿದ್ದರು. ಇದೀಗ ಇದ್ದಕ್ಕಿದ್ದಂತೆ ದೇವೇಗೌಡ ಅವರ ಮೇಲೇಕೆ ಸಹಾನುಭೂತಿ ಬಂತು ಎಂಬುದು ಗೊತ್ತಿಲ್ಲ ಎಂದು ಹೇಳಿದ್ದಾರೆ. 
ಚುನಾವಣಾ ಪ್ರಚಾರ ಸಂದರ್ಭದಲ್ಲಿ ಇದೀಗ, ದೇವೇಗೌಡ ಅವರು ರಾಜ್ಯವನ್ನು ಅಭಿವೃದ್ಧಿ ಮಾಡಿಲ್ಲ ಎಂದು ಆರೋಪಿಸಿದ್ದಾರೆ. ಬಿಜೆಪಿ ಕೂಡ ರಾಜ್ಯದಲ್ಲಿ ಅಧಿಕಾರ ನಡೆಸಿತ್ತು. ಅಧಿಕಾರಾವಧಿಯಲ್ಲಿ ರಾಜ್ಯವನ್ನು ಪ್ರಧಾನಿಮಂತ್ರಿಗಳಾಗಲೀ, ಬಿಜೆಪಿಯಾಗಲಿ ಅಭಿವೃದ್ಧಿ ಮಾಡಿದೆಯೇ ಎಂದು ಪ್ರಶ್ನಿಸಿದ್ದಾರೆ. 
ಚುನಾವಣೆಯಲ್ಲಿ ಬಹುದೊಡ್ಡ ಸೋಲು ಕಾಣುತ್ತೇವೆಂಬುದು ಬಿಜೆಪಿ ನಾಯಕರಿಗೆ ತಿಳಿದಿದೆ. ಹೀಗಾಗಿಯೇ ಸರ್ಕಾರ ರಚನೆ ಮಾಡಲು ಇತರೆ ಪಕ್ಷಗಳ ಬಾಗಿಲು ಬಡಿಯಲು ಮುಂದಾಗಿದ್ದಾರೆ. ಹೀಗಾಗಿಯೇ ಮೋದಿಯವರು ಸ್ಥಳೀಯ ಪಕ್ಷಗಳ ಮೇಲೆ ಸಹಾನುಭೂತಿ ತೋರಿಸುತ್ತಿದ್ದಾರೆಂದು ತಿಳಿಸಿದ್ದಾರೆ. 
ಈ ಸಲ ಕಪ್ ನಮ್ದೆ ಎಂಬ ಘೋಷಣಾವಾಕ್ಯದೊಂದಿಗೆ ರ್ಯಾಲಿಯನ್ನು ಆರಂಭಿಸಿರುವ ಕುಮಾರಸ್ವಾಮಿಯವರು ಈ ಬಗ್ಗೆ ಮಾತನಾಡಿದ್ದು, ರಾಜ್ಯದ ಜನತೆಯೊಂದಿಗೆ ನಾನು 50-50 ಆಟವನ್ನು ಆಡುವುದಿಲ್ಲ. ಈ ಸಲ ಕಪ್ ನಮ್ದೆ ಎಂಬುದರೊಂದಿಗೆ ಚುನಾವಣೆಯಲ್ಲಿ ಬಹುಮತದೊಂದಿಗೆ ನಾವು ಗೆಲವು ಸಾಧಿಸುತ್ತೇವೆಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ