ಶಿರಸಿ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ್ 
ರಾಜಕೀಯ

ಐಟಿ ದಾಳಿಗಳು ಬಿಜೆಪಿ ಪಿತೂರಿ: ಶಿರಸಿ ಕಾಂಗ್ರೆಸ್ ಅಭ್ಯರ್ಥಿ

ನಾನು ಯಾವುದೇ ರೀತಿಯ ಅಕ್ರಮ ಆಸ್ತಿ, ಕಪ್ಪುಹಣವನ್ನು ಹೊಂದಿಲ್ಲ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಬಿಜೆಪಿ ಪಿತೂರಿ ಎಂದು ಶಿರಸಿ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ್ ಅವರು ಗುರವಾರ ಹೇಳಿದ್ದಾರೆ...

ಕಾರವಾರ: ನಾನು ಯಾವುದೇ ರೀತಿಯ ಅಕ್ರಮ ಆಸ್ತಿ, ಕಪ್ಪುಹಣವನ್ನು ಹೊಂದಿಲ್ಲ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಬಿಜೆಪಿ ಪಿತೂರಿ ಎಂದು ಶಿರಸಿ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ್ ಅವರು ಗುರವಾರ ಹೇಳಿದ್ದಾರೆ. 
ಮಂಗಳವಾರವಷ್ಟೇ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಭೀಮಣ್ಣ ನಾಯ್ಕ್ ಅವರ ನಿವಾಸದ ಮೇಲೆ ದಾಳಿ ನಡೆಸಿ, ಎರಡು ದಿನಗಳ ಕಾಲ ಸುಧೀರ್ಘ ಪರಿಶೀಲನೆ ನಡೆಸಿದ್ದರು. 
ಐಟಿ ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಭೀಮಣ್ಣ ನಾಯ್ಕ್ ಅವರು, ಐಟಿ ಅಧಿಕಾರಿಗಳು 2 ದಿನಗಳ ಕಾಲ ಮನೆ ಹಾಗೂ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಯಾವುದೇ ರೀತಿಯ ಅಕ್ರಮ ಆಸ್ತಿಗಳು ಪತ್ತೆಯಾಗಿಲ್ಲ. ನಾನು ಗೆಲ್ಲುವ ಅಭ್ಯರ್ಥಿ ಎಂಬುದು ಬಿಜೆಪಿಗೆ ಗೊತ್ತಿದೆ. ಹೀಗಾಗಿ ಭೀತಿಗೊಂಡು ನನ್ನ ವಿರುದ್ಧ ಪಿತೂರಿ ನಡೆಸಿ, ಐಟಿ ದಾಳಿ ನಡೆಸಿದ್ದಾರೆ. ಈ ಮೂಲಕ ಅವರ 2 ದಿನಗಳ ಸಮಯವನ್ನು ವ್ಯರ್ಥ ಮಾಡಿಕೊಂಡಿದ್ದಾರೆಂದು ಹೇಳಿದ್ದಾರೆ. 
ಬಿಜೆಪಿಯ ಇಂತಹ ತಂತ್ರಗಳಿಂದ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಕ್ಷೇತ್ರದಲ್ಲಿ ಏನಾಗುತ್ತಿದೆ ಎಂಬುದು ಜನಕ್ಕೆ ಗೊತ್ತಿದೆ. ನನ್ನ ವಿರುದ್ಧ ನಿಂತವರಿಗೆ ಇಲ್ಲಿನ ಜನರೇ ದಿಟ್ಟ ಉತ್ತರವನ್ನು ನೀಡಲಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!