ಪ್ರೆಸ್ ಕ್ಲಬ್ ಸಂವಾದದಲ್ಲಿ ಡಿ. ಕೆ. ಶಿವಕುಮಾರ್ 
ರಾಜಕೀಯ

ಬೆಂಗಳೂರು ರಾಷ್ಟ್ರದ ಹೆಮ್ಮೆ , ಬಿಜೆಪಿಯವರು ಅಪಮಾನ ಮಾಡಬಾರದು- ಡಿ. ಕೆ. ಶಿವಕುಮಾರ್

ವಿಶ್ವಮಟ್ಟದಲ್ಲಿ ಡೈನಾಮಿಕ್ ಸಿಟಿ, ಸಿಲಿಕಾನ್ ಸಿಟಿ ಎಂದು ಖ್ಯಾತಿಯಾಗಿರುವ ಬೆಂಗಳೂರು ರಾಷ್ಟ್ರದ ಹೆಮ್ಮೆಯ ಪ್ರತೀಕವಾಗಿದೆ . ಇಂತಹ ನಗರದ ಗೌರವವನ್ನು ಬಿಜೆಪಿಯವರು ಹಾಳು ಮಾಡಬಾರದು ಎಂದು ಇಂಧನ ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು :  ವಿಶ್ವಮಟ್ಟದಲ್ಲಿ ಡೈನಾಮಿಕ್ ಸಿಟಿ, ಸಿಲಿಕಾನ್ ಸಿಟಿ ಎಂದು ಖ್ಯಾತಿಯಾಗಿರುವ ಬೆಂಗಳೂರು  ರಾಷ್ಟ್ರದ ಹೆಮ್ಮೆಯ ಪ್ರತೀಕವಾಗಿದೆ . ಇಂತಹ ನಗರದ ಗೌರವವನ್ನು ಬಿಜೆಪಿಯವರು ಹಾಳು ಮಾಡಬಾರದು ಎಂದು ಇಂಧನ ಸಚಿವ ಡಿ. ಕೆ. ಶಿವಕುಮಾರ್  ಹೇಳಿದ್ದಾರೆ.

ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿಂದು ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಡೈನಾಮಿಕ್ ಸಿಟಿ ಎಂದು ಖ್ಯಾತಿಯಾಗಿರುವ ಬೆಂಗಳೂರನ್ನು ಪ್ರಧಾನಿ ನರೇಂದ್ರ ಮೋದಿ ಹೇಗೆ ಸಿನ್ ಸಿಟಿ ಎಂದು ಕರೆದರು.ಇದು ಕರ್ನಾಟಕ ಮಾತ್ರವಲ್ಲ. ದೇಶಕ್ಕೆ ತೋರಿರುವ ಅಗೌರವವಾಗಿದೆ. ದೇಶದ  ಅಭಿವೃದ್ದಿಯಲ್ಲಿ ಬೆಂಗಳೂರು  ಸಂಕೇತವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಚುನಾವಣಾ ಕಾರಣಕ್ಕಾಗಿ ರಾಜಕೀಯ ಗಿಮಿಕ್‍ನ ಹೇಳಿಕೆ ನೀಡಿ ಬೆಂಗಳೂರನ್ನು ಅವಮಾನಿಸುತ್ತಿರುವುದು ಸರಿಯಲ್ಲ. ನಮ್ಮ ಸರ್ಕಾರದ ಮೇಲೆ ಅಥವಾ ಯಾವುದೇ ಸಚಿವರ ಮೇಲೆ ಒಂದೇ ಒಂದು ಭ್ರಷ್ಟಾಚಾರದ ಆರೋಪ ಇಲ್ಲ  ಮೋದಿ ನರೇಂದ್ರಮೋದಿ ಕೀಳುಮಟ್ಟದ ಟೀಕೆ ಮಾಡಬಾರದು ಎಂದು ಹೇಳಿದರು

ಬಿಜೆಪಿ ಹಾಗೂ ಜೆಡಿಎಸ್  ಅಧಿಕಾರಕ್ಕೆ ಬರುವ ಕನಸು ನನಸಾಗುವುದಿಲ್ಲ. ರಾಜ್ಯಾದ್ಯಂತ ಕಾಂಗ್ರೆಸ್ ಪರ ಅಲೆ ಎದಿದ್ದು, ಸಂಪೂರ್ಣ ಬಹುಮತ ಪಡೆಯುವುದರೊಂದಿಗೆ ಅಧಿಕಾರ ರಚಿಸುವುದಾಗಿ ಡಿ. ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ದಕ್ಷಿಣ ಭಾರತದಲ್ಲಿ ಜನ ಬಿಜೆಪಿಯ ಮಾತು ಕೇಳುವುದಿಲ್ಲ. ಹಾಗಾಗಿ ಬಿಜೆಪಿಗೆ ಮತ ಹಾಕುವುದಿಲ್ಲ ಎಂಬ ಅಪನಂಬಿಕೆ ಇದೆ. ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂಬುದನ್ನು ಮನಗಂಡ ನಂತರ ಜೆಡಿಎಸ್‍ನ್ನು ಹಚ್ಚಿಕೊಳ್ಳುವ ರಾಜಕಾರಣ ಮಾಡುತ್ತಿದೆ. ಅದಕ್ಕಾಗಿಯೇ ಪ್ರಧಾನಿ ಮೋದಿಯವರು ಬೆಂಗಳೂರಿಗೆ ಬಂದ ತಕ್ಷಣ ದೇವೇಗೌಡರನ್ನು ಹೊಗಳಿದ್ದಾರೆ. ಅದರ ಅರ್ಥ ಬಿಜೆಪಿ ಪರಾವಲಂಬಿಯಾಗಿದೆ ಎಂದು ಹೇಳಿದರು.

ಸದ್ಯಕ್ಕೆ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದಾರೆ. ಮುಂದಿನ ಚುನಾವಣೆಗೂ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದಾರೆ. ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ಹೇಳಿದರು.

ದಲಿತ ಮುಖ್ಯಮಂತ್ರಿ ಬಗ್ಗೆ ಕಾಂಗ್ರೆಸ್‍ನಲ್ಲಿ ಮಾತ್ರ ಪ್ರಶ್ನಿಸಲಾಗುತ್ತಿದೆ. ಅದೇ ಜೆಡಿಎಸ್, ಬಿಜೆಪಿಯನ್ನು ಏಕೆ ಪ್ರಶ್ನಿಸುತ್ತಿಲ್ಲ. ಬಿಜೆಪಿಯಲ್ಲಿ ಲಿಂಗಾಯತರನ್ನು ಬಿಟ್ಟು ಒಕ್ಕಲಿಗರು ಅಥವಾ ದಲಿತರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ನಿರ್ಧಾರ ಏಕೆ ತೆಗೆದುಕೊಂಡಿಲ್ಲ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಈ ಬಾರಿ ಒಕ್ಕಲಿಗರಿಗೆ ಅತಿ ಹೆಚ್ಚು ಟಿಕೆಟ್‍ಗಳನ್ನು ನೀಡಿದೆ. ಹಿಂದೆ ಎಸ್.ಎಂ.ಕೃಷ್ಣರಂತಹ ಪ್ರಭಾವಿ ನಾಯಕರಿದ್ದಾಗಲೂ ಇಷ್ಟು ಜನ ಒಕ್ಕಲಿಗ ಮುಖಂಡರಿಗೆ ಟಿಕೆಟ್ ನೀಡಿರಲಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್