ಕಾಂಗ್ರೆಸ್, ಬಿಜೆಪಿಗೆ ಜೆಡಿಎಸ್ ಅಧಿಕಾರಕ್ಕೆ ಬರುವ ಬಗ್ಗೆ ಭಯ, ಅದಕ್ಕಾಗಿ ನಮ್ಮನ್ನು ಟಾರ್ಗೆಟ್: ಕುಮಾರ ಸ್ವಾಮಿ
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರುತ್ತದೆಂಬ ಭಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗಳು ಜೆಡಿಎಸ್ ಪಕ್ಷವನ್ನು ...
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರುತ್ತದೆಂಬ ಭಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗಳು ಜೆಡಿಎಸ್ ಪಕ್ಷವನ್ನು ಟಾರ್ಗೆಟ್ ಮಾಡುತ್ತಿವೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರ ಸ್ವಾಮಿ ಆರೋಪಿಸಿದ್ದಾರೆ.
ಎರಡು ರಾಷ್ಟ್ರೀಯ ಪಕ್ಷಗಳು ಭಯದಿಂದಾಗಿ ಜೆಡಿಎಸ್ ಪಕ್ಷವನ್ನು ಟಾರ್ಗೆಟ್ ಮಾಡಿ ಸುಖಾ ಸುಮ್ಮನೇ ಟೀಕಿಸುತ್ತಿವೆ ಎಂದು ಕುಮಾರ ಸ್ವಾಮಿ ಟ್ವೀಟ್ ಮಾಡಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡರನ್ನು ಹೊಗಳಿದ ಪ್ರಧಾನಿ ನರೇಂದ್ರ ಮೋದಿ ಪ್ರಾದೇಶಿಕ ಪಕ್ಷದ ಸಾಮರ್ಥ್ಯವನ್ನು ಅರಿತಿದ್ದಾರೆ ಎಂದು ಹೇಳಿರುವ ಕುಮಾರ ಸ್ವಾಮಿ, ಹೀಗಾಗಿ ಮೋದಿಯವರು ಸ್ಥಳೀಯ ಪಕ್ಷಗಳ ಮೇಲೆ ಸಹಾನುಭೂತಿ ತೋರಿಸುತ್ತಿದ್ದಾರೆಂದು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.