ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಅಧಿಕಾರಕ್ಕೆ ಬಂದ 10 ದಿನದಲ್ಲಿ ರೈತರ ಸಾಲ ಮನ್ನಾ: ರಾಹುಲ್ ಗಾಂಧಿ

2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ದಿನದಲ್ಲೇ ದೇಶಾದ್ಯಂತ ಎಲ್ಲಾ ರೈತರ ಸಾಲ ಮನ್ನಾ....

ರಾಹುಲ್ ಗಾಂಧಿ
Lingaraj Badiger
Updated On : 4 May 2018, 7:38 am
ಕಲಬುರ್ಗಿ: 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ದಿನದಲ್ಲೇ ದೇಶಾದ್ಯಂತ ಎಲ್ಲಾ ರೈತರ ಸಾಲ ಮನ್ನಾ ಮಾಡುವುದಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಕಲಬುರ್ಗಿ ಜಿಲ್ಲೆಯ ಕಾಳಗಿಯಲ್ಲಿ ಕಾಂಗ್ರೆಸ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, 2019ರಲ್ಲಿ ನಾವು ಅಧಿಕಾರಕ್ಕೆ ಬಂದ ತಕ್ಷಣ ರೈತರ ಸಾಲ ಮನ್ನಾ ಮಾಡುತ್ತೇವೆ ಮತ್ತು ಕರ್ನಾಟಕ ರೈತರ ಅಭಿವೃದ್ಧಿಗಾಗಿ ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲಾಗುವುದು ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಸಹಾಯಕ್ಕೆ ಬರುವುದಿಲ್ಲ ಎಂದು ಆರೋಪಿಸಿದ ರಾಹುಲ್ ಗಾಂಧಿ, ಮೋದಿ ಶ್ರೀಮಂತರ 2.5 ಲಕ್ಷ ಕೋಟಿ ಸಾಲ ಮರೆತುಬಿಡುತ್ತಾರೆ. ಆದರೆ ರೈತರ ಒಂದು ರುಪಾಯಿ ಸಾಲ ಸಹ ಅವರು ಮನ್ನಾ ಮಾಡುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

Advertisement

Advertisement

ನಾವು ಕರ್ನಾಟಕ ರೈತರ 8 ಸಾವಿರ ಕೋಟಿ ರುಪಾಯಿ ರೈತರ ಸಾಲ ಮನ್ನಾ ಮಾಡಿದ್ದೇವೆ. ಆದರೆ ಮೋದಿ ರಾಜ್ಯದ ರೈತರಿಗಾಗಿ ಏನನ್ನೂ ಮಾಡಿಲ್ಲ ಎಂದು ದೂರಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement