ಪ್ರಧಾನಮಂತ್ರಿ ನರೇಂದ್ರ ಮೋದಿಯವರಿ ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜಕೀಯ

ಭ್ರಷ್ಟಾಚಾರ ದೌರ್ಬಲ್ಯವನ್ನೇ ಚುನಾವಣಾ ಮುಖ್ಯಾಂಶವಾಗಿಸಿರುವುದು ಆಶ್ಚರ್ಯ: ಮೋದಿಗೆ ಸಿಎಂ ಸಿದ್ದು ಟಾಂಗ್

ಭ್ರಷ್ಟಾಚಾರ ಬಿಜೆಪಿ ದುರ್ಬಲ ಅಂಶವಾಗಿದ್ದು, ಅದನ್ನೇ ಕರ್ನಾಟಕ ಚುನಾವಣೆಯಲ್ಲಿ ಮುಖ್ಯ ವಿಚಾರವಾಗಿಸಿಕೊಂಡಿರುವುದು ನಿಜಕ್ಕೂ ಆಶ್ಚರ್ಯವನ್ನು ತಂದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ...

ನವದೆಹಲಿ: ಭ್ರಷ್ಟಾಚಾರ ಬಿಜೆಪಿ ದುರ್ಬಲ ಅಂಶವಾಗಿದ್ದು, ಅದನ್ನೇ ಕರ್ನಾಟಕ ಚುನಾವಣೆಯಲ್ಲಿ ಮುಖ್ಯ ವಿಚಾರವಾಗಿಸಿಕೊಂಡಿರುವುದು ನಿಜಕ್ಕೂ ಆಶ್ಚರ್ಯವನ್ನು ತಂದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ. 
ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಾಗ್ದಾಳಿ ನಡೆಸಿದ್ದ ಪ್ರಧಾನಿ ಮೋದಿಯವರು, ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರ ಸೀದಾ-ರುಪಾಯಿ ಸರ್ಕಾರ ಎಂದು ವ್ಯಂಗ್ಯವಾಡಿದ್ದರು. 
ಇದಲ್ಲದೆ, ಮೇ.3 ರಂದು ನಡೆದಿದ್ದ ಸಾರ್ವಜನಿಕ ರ್ಯಾಲಿಯಲ್ಲಿಯೂ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ್ದರು. ಭ್ರಷ್ಟಾಚಾರವಿಲ್ಲದೆ ಕರ್ನಾಟಕ ರಾಜ್ಯದಲ್ಲಿ ಒಂದು ಸಣ್ಣ ಕೆಲಸ ಕೂಡ ಸಾಧ್ಯವಾಗುವುದಿಲ್ಲ ಎಂದಿದ್ದರು. 
ಈ ಹೇಳಿಕೆಗಳಿಗೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ತಿರುಗೇಟು ನೀಡಿರುವ ಸಿದ್ದರಾಮಯ್ಯ ಅವರು, ನಿಮ್ಮ ದುರ್ಬಲ ಅಂಶವನ್ನು ಚುನಾವಣೆಯ ಪ್ರಮುಖ ಅಂಶವಾಗಿರಿಸಿಕೊಂಡಿರುವುದನ್ನು ನೋಡಿ ಆಶ್ಚರ್ಯವಾಯಿತು. ನಮ್ಮ ಸರ್ಕಾರದ ಕುರಿತು ಆಧಾರರಹಿತ ಭ್ರಷ್ಟಾಚಾರ ಆರೋಪ ಮಾಡುತ್ತಿದ್ದೀರಿ. 
ಚುನಾವಣೆಯಲ್ಲಿ ಗೆಲವು ಸಾಧಿಸುವ ಸಲುವಾಗಿ ರೆಡ್ಡಿ ಬ್ರದರ್ಸ್ ಬಳಕೆ ಮಾಡಿಕೊಳ್ಳುತ್ತಿರುವ ನೀವು ನೈತಿಕತೆಯ ಕುರಿತು 5 ನಿಮಿಷಗಳ ಕಾಲ ಮಾಡನಾಡಬಹುದೇ? ಎಂದು ಪ್ರಶ್ನಿಸಿದ್ದಾರೆ.
23 ಭ್ರಷ್ಟಾಚಾರ, ಮೋಸ ಹಾಗೂ ನಕಲಿ ಪ್ರಕರಣಗಳು ದಾಖಲಾಗಿರುವ ವ್ಯಕ್ತಿಯನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದ್ದೀರಿ. ಭ್ರಷ್ಟಾಚಾರ ಪ್ರಕರಣಗಳನ್ನು ಎದುರಿಸುತ್ತಿರುವ 11 ಟಾಪ್ ನಾಯಕರ ಕುರಿತು ಯಾವಾಗ ಮಾತನಾಡುತ್ತೀರಿ? ನಿಮ್ಮ ಉತ್ತರಕ್ಕಾಗಿ ಕಾಯುತ್ತಿದ್ದೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್