ನರೇಂದ್ರ ಮೋದಿ 
ರಾಜಕೀಯ

ಗದಗದಲ್ಲಿ ಮಹದಾಯಿ ದಾಳ ಉರುಳಿಸಿದ ಮೋದಿ, ಮಾತುಕತೆ ಮೂಲಕ ಪರಿಹಾರಕ್ಕೆ ಬದ್ಧ ಎಂದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಗದಗದಲ್ಲಿ ಮಹದಾಯಿ ದಾಳ ಉರುಳಿಸಿದ್ದು, ಪರಸ್ಪರ ಮಾತುಕತೆ ಮೂಲಕ....

ಗದಗ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಗದಗದಲ್ಲಿ ಮಹದಾಯಿ ದಾಳ ಉರುಳಿಸಿದ್ದು, ಪರಸ್ಪರ ಮಾತುಕತೆ ಮೂಲಕ ವಿವಾದ ಪರಿಹರಿಸಿಕೊಳ್ಳಲು ತಾವು ಬದ್ಧ ಎಂದು ಹೇಳಿದ್ದಾರೆ.
ಇಂದು ಗದಗಿನ ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ಬಿಜೆಪಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಮೋದಿ, ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್‌ ರಾಜಕೀಯ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.
ಮಹದಾಯಿ ವಿಷಯದಲ್ಲಿ ಕಾಂಗ್ರೆಸ್ ಮಾಡುತ್ತಿರುವ ಗೊಂದಲವನ್ನು ಎಳೆ ಎಳೆಯಾಗಿ ನಿಮ್ಮ ಮುಂದೆ ಬಿಚ್ಚಿಡುತ್ತೇನೆ. ಗೋವಾದಲ್ಲಿ ಸೋನಿಯಾ ಗಾಂಧಿಯವರು 2007 ರಲ್ಲಿ ಯಾವುದೇ ಕಾರಣಕ್ಕೂ ಮಹದಾಯಿ ನೀರಿನ ಒಂದು ಹನಿಯನ್ನೂ ಕೂಡ ಕರ್ನಾಟಕಕ್ಕೆ ಹರಿಸುವದಿಲ್ಲ ಎಂಬ ಮಾತು ಮರೆತುಹೋಯಿತೇ ಮುಖ್ಯಮಂತ್ರಿಗಳೇ? ಎಂದು ಪ್ರಧಾನಿ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.
ಗೋವಾದಲ್ಲಿ ಚುನಾವಣೆ ಸೋತ ನಂತರ,  ಕಾಂಗ್ರೆಸ್ ಮಹದಾಯಿ ವಿಷಯದಲ್ಲಿ ಕರ್ನಾಟಕದ ಜನತೆಯ ಮುಂದೆ ನಾಟಕವಾಡುತ್ತಿದೆ. ಆದ ಕಾರಣ ಇಲ್ಲೂ ಕೂಡ ಕಾಂಗ್ರೆಸ್ ಸೋತು ಹೋಗಲಿದೆ. ಮಹದಾಯಿ ವಿಚಾರವನ್ನು ನಾವು ಮಾತುಕತೆ ಮುಖಾಂತರ ಪರಿಹರಿಸಲು ಬದ್ಧರಾಗಿದ್ದೇವೆ ಎಂದರು.
ರಾಜ್ಯದ ಸಮೃದ್ಧ ಕೆರೆಗಳು ನೀರಿಲ್ಲದ್ದೆ ಬರಿದಾಗಿವೆ. ನೀರು ನೀರು ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಕೆರೆಗಳ ಪುನಶ್ಚೇತನಕ್ಕೆ ಕಾಂಗ್ರೆಸ್‌ ಸರ್ಕಾರ ಕ್ರಮ ಕೈಗೊಳ್ಳಲಿಲ್ಲ. ಕೆರೆಗಳು ಬರಿದಾಗಿ ಒಣಗುವುದನ್ನೇ ಕಾಯುತ್ತಿದ್ದಾರೆ. ಬಿಲ್ಡರ್ ಗಳಿಗೆ ಮಾರಾಟ ಮಾಡಲು ಹೊರಟ್ಟಿದ್ದಾರೆ. ಕಾಂಗ್ರೆಸ್ ಸುಳ್ಳು ಹೇಳು ಹೇಳಿ, ಜನರ ಕಣ್ಣಿಗೆ ಮಣ್ಣೆರಚುವುದರಲ್ಲಿ ನಿಸ್ಸೀಮರು. ಕಾಂಗ್ರೆಸ್‌ ಅಧಿಕಾರಕ್ಕಾಗಿ ಜನರನ್ನು ಮರುಳು ಮಾಡುತ್ತಿದೆ ಎಂದು ಪ್ರಧಾನಿ ಆರೋಪಿಸಿದರು.
ಮುಖ್ಯಮಂತ್ರಿಗಳೇ, ಇಲ್ಲಿನ ರೈತರನ್ನು ಹಾದಿತಪ್ಪಿಸುವ ಬದಲು ಮಹದಾಯಿ ವಿಚಾರವಾಗಿ ನಿಮ್ಮ ನಿಲುವೇನು ಎಂಬುದನ್ನು ಸೋನಿಯಾ ಗಾಂಧಿಯವರ ಜತೆ ಮಾತನಾಡಿ ಸ್ಪಷ್ಟಪಡಿಸಿ. ಕರ್ನಾಟಕದ ರೈತರ, ಯುವಕರ ಹಾದಿತಪ್ಪಿಸಬೇಡಿ ಎಂದು ಮೋದಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video