ಕೇಂದ್ರ ಸಚಿವೆ ಸ್ಮೃತಿ ಇರಾನಿ
ನವಲಗುಂದ; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾರದ ಅಡಿಯಲ್ಲಿ ಮಹಿಳಾ ಅಧಿಕಾರಿಗಳು ಸುರಕ್ಷಿತರಾಗಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿಯವರು ಶುಕ್ರವಾರ ಹೇಳಿದ್ದಾರೆ.
ನವಲಗುಂದದ ಅನ್ನಿಗೆರೆಯಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿರುವ ಅವರು, ಐಎಎಸ್ ಅಧಿಕಾರಿ ಸಿ.ಶಿಖಾ ಮತ್ತು ಪೊಲೀಸ್ ಅಧಿಕಾರಿ ಅನುಪಮಾ ಶೆಣೈ ಅವರ ಮೇಲಿನ ದೌರ್ಜನ್ಯಗಳು ಮುಂದುವರೆಯುತ್ತಲೇ ಇದೆ. ಸಿದ್ದರಾಮಯ್ಯ ಸರ್ಕಾರದ ಅಡಿಯಲ್ಲಿ ಮಹಿಳಾಧಿಕಾರಿಗಳು ಸುರಕ್ಷಿತರಾಗಿಲ್ಲ ಎಂದು ಹೇಳಿದ್ದಾರೆ.
ಮಹಿಳಾಧಿಕಾರಿಗಳಿಗೆ ರಾಜ್ಯದಲ್ಲಿ ಇಂತಹ ಪರಿಸ್ಥಿತಿ ಇರುವಾಗ, ಸಾಮಾನ್ಯ ಮಹಿಳೆಯರ ಪರಿಸ್ಥಿತಿ ಏನು?... ಸರ್ಕಾರದ ಇಂತಹ ಕೆಟ್ಟ ವರ್ತನೆಯಿಂದಾಗಿ ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಸಿದ್ದರಾಮಯ್ಯ ಅವರನ್ನು ಸಿದ್ದರೂಪಯ್ಯ ಎಂದು ಕರೆದ ಅವರು, ಸಿದ್ದರಾಮಯ್ಯ ಅವರ ಭ್ರಷ್ಟ ನಿಯಮಗಳುಗಳು ದೆಹಲಿಯಲ್ಲಿ ಭಾರೀ ಚರ್ಚೆಯಾಗುತ್ತಿವೆ. ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದ ಭಾರೀ ಮೊತ್ತದ ಅನುದಾನವನ್ನು ಸೂಕ್ತ ಕೆಲಸಗಳಿಗೆ ಬಳಕೆಯಾಗಿಲ್ಲ. ಜಾತಿ ಆಧಾರದ ಮೇಲೆ ಸಿದ್ದರಾಮಯ್ಯ ಅವರು ಸಮಾಜವನ್ನು ಒಡೆಯುತ್ತಿದ್ದಾರೆ. ಶೀಘ್ರದಲ್ಲಿಯೇ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಸರಿಯಾದ ಪಾಠವನ್ನು ಕಲಿಸಲಿದ್ದಾರೆಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics