ಸಾಂದರ್ಭಿಕ ಚಿತ್ರ 
ರಾಜಕೀಯ

ಕುಡಿಯುವ ನೀರು ಮೂಲಕ ಮತದಾರರ ಓಲೈಕೆಗೆ ಬಳ್ಳಾರಿ ನೇತಾರರು ಮುಂದು

ಈ ಬಾರಿಯ ಚುನಾವಣೆಯಲ್ಲಿ ಬಳ್ಳಾರಿಯಲ್ಲಿ ಕುಡಿಯುವ ನೀರು ಪ್ರಮುಖ ವಿಷಯವಾಗಲಿದೆ. ಮಳೆಯ ...

ಬಳ್ಳಾರಿ: ಈ ಬಾರಿಯ ಚುನಾವಣೆಯಲ್ಲಿ ಬಳ್ಳಾರಿಯಲ್ಲಿ ಕುಡಿಯುವ ನೀರು ಪ್ರಮುಖ ವಿಷಯವಾಗಲಿದೆ. ಮಳೆಯ ಕುಂಠಿತ ಮತ್ತು ತುಂಗಭದ್ರಾ ಅಣೆಕಟ್ಟಿಗೆ ಒಳಹರಿವು ಕಡಿಮೆಯಾಗಿರುವುದರಿಂದ ನೀರಿಗೆ ಅಭಾವವಿರುವುದರಿಂದ ಜನರಿಗೆ ಕುಡಿಯುವ ನೀರು ಪೂರೈಕೆ ಕಷ್ಟಕರ ಕೆಲಸವಾಗಲಿದೆ. ರಾಜಕೀಯ ಪಕ್ಷಗಳ ಮುಖಂಡರು ಕುಡಿಯುವ ನೀರನ್ನು ಪೂರೈಸುವ ಭರವಸೆಯನ್ನು ಮತದಾರರಿಗೆ ನೀಡುತ್ತಿದ್ದಾರೆ.

ಬಳ್ಳಾರಿ ನಗರಕ್ಕೆ ಪ್ರತಿ 15 ದಿನಗಳಿಗೊಮ್ಮೆ ಕುಡಿಯುವ ನೀರು ಪೂರೈಕೆಯಾಗುವುದರಿಂದ ಚುನಾವಣೆ ಸಂದರ್ಭದಲ್ಲಿ ಇದನ್ನೇ ಅಸ್ತ್ರವಾಗಿಟ್ಟುಕೊಂಡು ರಾಜಕೀಯ ನೇತಾರರು ಈಗಾಗಲೇ ಹಲವು ಪ್ರಮುಖ ಭರವಸೆಗಳನ್ನು ನೀಡಿದ್ದಾರೆ. ಮೇ ತಿಂಗಳಲ್ಲಿ ಇನ್ನಷ್ಟು ಬಿಸಿಲುಂಟಾಗಿರುವುದರಿಂದ ಕುಡಿಯುವ ನೀರಿನ ಕೊರತೆ ಅನುಭವಿಸುತ್ತಿರುವ ಜನರು ಬಾಟಲಿ ನೀರುಗಳನ್ನು ತರಲು ಪ್ರಯತ್ನಿಸುತ್ತಿದ್ದಾರೆ. ಬೆಳಗಾವಿ ನಗರದಲ್ಲಿ ಹಲವು ಕುಡಿಯುವ ನೀರು ಪೂರೈಕೆ ಮಾಡುವ ನೀರಿನ ಘಟಕಗಳು ಕಣ್ತೆರೆಯುತ್ತಿವೆ.

ಬಳ್ಳಾರಿಯಲ್ಲಿ ಪ್ರಸ್ತುತ ಸುಮಾರು 43 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ. ಪರಿಸ್ಥಿತಿ ಎಷ್ಟು ಹದಗೆಟ್ಟಿದೆಯೆಂದರೆ ಶಾಸಕ ಅನಿಲ್ ಲಾಡ್ ಕೆಲವು ಕ್ಷೇತ್ರಗಳಿಗೆ ಕಾಲಿಟ್ಟರೆ ಮಹಿಳೆಯರಿಂದ ಆಕ್ರೋಶ ಎದುರಿಸುವ ಸ್ಥಿತಿಯಿದೆ. ದಿನಪೂರ್ತಿ ಕುಡಿಯುವ ನೀರು ಪೂರೈಸುವ ಭರವಸೆಯನ್ನು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತಿಳಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕುಡಿಯುವ ನೀರಿಗೆ ವಿಶೇಷ ಪ್ಯಾಕೇಜ್ ನ್ನು ಬಳ್ಳಾರಿಗೆ ನೀಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ