ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ವಿರೋಧದ ನಡುವೆಯೂ ಸಿಎಂ ಸಿದ್ದರಾಮಯ್ಯ ಪರ ದರ್ಶನ್ ಪ್ರಚಾರ

ರಾಜ್ಯ ವಿಧಾನಸಬಾ ಚುನಾವಣೆ ಹಿನ್ನಲೆಯಲ್ಲಿ ಸಿನಿಮಾ ನಟರೂ ಪ್ರಚಾರಕ್ಕಿಳಿದಿದ್ದು, ಶನಿವಾರ ಮೈಸೂರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಚಿತ್ರ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪ್ರಚಾರ ನಡೆಸಿದರು...

ವಿರೋಧದ ನಡುವೆಯೂ ಸಿಎಂ ಸಿದ್ದರಾಮಯ್ಯ ಪರ ದರ್ಶನ್ ಪ್ರಚಾರ
Manjula VN
Updated On : 6 May 2018, 10:13 am
ಮೈಸೂರು: ರಾಜ್ಯ ವಿಧಾನಸಬಾ ಚುನಾವಣೆ ಹಿನ್ನಲೆಯಲ್ಲಿ ಸಿನಿಮಾ ನಟರೂ ಪ್ರಚಾರಕ್ಕಿಳಿದಿದ್ದು, ಶನಿವಾರ ಮೈಸೂರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಚಿತ್ರ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪ್ರಚಾರ ನಡೆಸಿದರು. 
ಮೈಸೂರಿನಲ್ಲಿ ನಟ ದರ್ಶನ್ ಅವರು ನಿನ್ನೆ 25ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರಚಾರ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ದರ್ಶನ್ ಅವರು ಪ್ರಚಾರ ನಡೆಸುತ್ತಿರುವುದನ್ನು ವಿರೋಧಿಸಿದ ಜೆಡಿಎಸ್ ಕಾರ್ಯಕರ್ತರು ನಾಗನಹಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. 
ಪ್ರತಿಭಟನೆ ವೇಳೆ ಯಾವುದೇ ಕಾರಣಕ್ಕೂ ದರ್ಶನ್ ಅವರು ಪ್ರಚಾರ ನಡೆಸಬಾರದು ಎಂದು ಘೋಷಣೆಗಳನ್ನು ಕೂಗಿದರು. ಈ ವೇಲೆ ಸ್ಥಳಕ್ಕಾಗಮಿಸಿದ ಪೊಲೀಸರು, ದರ್ಶನ್ ಅವರ ಪ್ರಚಾರಕ್ಕೆ ಬಿಗಿ ಬಂದೋಬಸ್ತ್ ಒದಗಿಸಿದರು. 

Advertisement

Advertisement

ಪ್ರಚಾರದ ವೇಳೆ ಸಿದ್ದರಾಮಯ್ಯ ಅವರನ್ನು ಕೊಂಡಾಡಿದ ದರ್ಶನ್ ಅವರು, ಸಿದ್ದರಾಮಯ್ಯ ಅವರು ಎಲ್ಲರನ್ನೂ ಮಾತನಾಡಿಸಿಕೊಂಡು ಭಾಷಣ ಮಾಡುವಂತಹ ಡೇರ್ ಆ್ಯಂಡ್ ಡೆವಿಲ್ ಗುಣ ನನಗೆ ಬಹಳ ಇಷ್ಟ. ಅವರಿಗಿರುವ ಧೈರ್ಯ ಯಾರಿಗೂ ಬರುವುದಿಲ್ಲ. ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ ಅವರು ನನಗೂ ಸ್ನೇಹಿತ. ರಾಕೇಶ್ ಹೋಗಾದ ಬಹಳ ನೋವಾಗಿತ್ತು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement