ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ 
ರಾಜಕೀಯ

ಸತ್ತವರ ಪಟ್ಟಿಯಲ್ಲಿ ಜೀವಂತ ವ್ಯಕ್ತಿಯ ಹೆಸರು; ವಿಷಾದ ವ್ಯಕ್ತಪಡಿಸಿದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ

ರಾಜ್ಯದಲ್ಲಿ ಆರ್'ಎಸ್ಎಸ್ ಕಾರ್ಯಕರ್ತರ ಕೊಲೆ ಪ್ರಕರಣ ಸಂಬಂಧ ಕೇಂದ್ರ ಗೃಹ ಸಚಿವರಿಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಯವರು ಸಲ್ಲಿಸಿದ್ದ ಪಟ್ಟಿಯೊಂದು ಇದೀಗ ಭಾರೀ ಸುದ್ದಿ ಮಾಡುತ್ತಿದ್ದು, ಈ ನಡುವಲ್ಲೇ ಶೋಭಾ ಅವರು ಅಚಾತುರ್ಯಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ...

ಬೆಂಗಳೂರು: ರಾಜ್ಯದಲ್ಲಿ ಆರ್'ಎಸ್ಎಸ್ ಕಾರ್ಯಕರ್ತರ ಕೊಲೆ ಪ್ರಕರಣ ಸಂಬಂಧ ಕೇಂದ್ರ ಗೃಹ ಸಚಿವರಿಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಯವರು ಸಲ್ಲಿಸಿದ್ದ ಪಟ್ಟಿಯೊಂದು ಇದೀಗ ಭಾರೀ ಸುದ್ದಿ ಮಾಡುತ್ತಿದ್ದು, ಈ ನಡುವಲ್ಲೇ ಶೋಭಾ ಅವರು ಅಚಾತುರ್ಯಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. 
ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಶೋಭಾ ಕರಂದ್ಲಾಜೆಯವರು, ಹಳೇ ವಿಚಾರವನ್ನು ಮತ್ತೆ ಸುದ್ದಿಗೆ ತಂದಿರುವುದಕ್ಕೆ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. 
ದೋಷಗಳಿಗೆ ಕಳೆದ ವರ್ಷವೇ ನಾನು ವಿಷಾದ ವ್ಯಕ್ತಪಡಿಸಿದ್ದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಬಳಿಕ ರಾಜ್ಯದಲ್ಲಿ ಬಿಜೆಪಿ ಹಾಗೂ ಆರ್'ಎಸ್ಎಸ್ ಕಾರ್ಯಕರ್ತ ಹತ್ಯೆಗಳ ಪಟ್ಟಿಯನ್ನು ಸಿದ್ದಪಡಿಸಲಾಗಿತ್ತು. ಈ ಪಟ್ಟಿಯಲ್ಲಿ ತಪ್ಪಾಗಿ ಅಶೋಕ್ ಪೂಜಾರಿಯವರ ಹೆಸರನ್ನು ಸೇರ್ಪಡೆಗೊಳಿಸಲಾಗಿತ್ತು, ಪಟ್ಟಿಯಲ್ಲಿ ಆಗಿರುವ ತಪ್ಪುಗಳ ಕುರಿತು ಕೇಂದ್ರ ಸರ್ಕಾರದ ಗಮನಕ್ಕೂ ತಂದಿದ್ದೇನೆಂದು ಹೇಳಿದ್ದಾರೆ. 
ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಅವರೂ ಕೂಡ ತಪ್ಪನ್ನು ಒಪ್ಪಿಕೊಂಡು ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದರು ಎಂದು ತಿಳಿಸಿದ್ದಾರೆ. 
ಇದೇ ವೇಳೆ ಹಳೇ ವಿಚಾರವನ್ನು ಮತ್ತೆ ಸುದ್ದಿಗೆ ತಂದಿರುವುದರ ಹಿಂದೆ ಯಾರಿದ್ದಾರೆಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಚುನಾವಣೆ ಹತ್ತಿರ ಬರುತ್ತಿದ್ದು, ಕಾಂಗ್ರೆಸ್ ಹಾಗೂ ಎಸ್'ಡಿಪಿಐ-ಪಿಎಫ್ಐ ನಡುವೆ ರಹಸ್ಯ ಮಾತುಕತೆಗಳು ನಡೆದಿವೆ. ಈ ವಿಚಾರದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು, ಕಾಂಗ್ರೆಸ್ ಹಳೇ ವಿಚಾರವನ್ನು ಸುದ್ದಿಗೆ ತಂದಿದೆ ಎಂದಿದ್ದಾರೆ. 
ಈ ವಿಚಾರದಲ್ಲಿ ರಾಜಕೀಯ ಮಾಡುವ ಬದಲು ಕಾಂಗ್ರೆಸ್ ನಾಯಕರು ಸಾವಿನಂಚಿನಲ್ಲಿದ್ದ ಪೂಜಾರಿಯವರಕ ಮನೆಗೆ ಭೇಟಿ ನೀಡಿ, ಸಹಾಯ ಮಾಡಬೇಕು ಎಂದು ಹೇಳಿದ್ದಾರೆ. 
ಆರ್'ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣ ಸಂಬಂಧ ಕಳೆದ ವರ್ಷ ಶೋಭಾ ಅವರು ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದರು. ಕಾಂಗ್ರೆಸ್ ಆಡಳಿತಾವಧಿಯಲ್ಲಿ ರಾಜ್ಯದ ಹಲವು ಬಿಜೆಪಿ ಕಾರ್ಯಕರ್ತರ ಕೊಲೆ ನಡೆದಿದೆ ಎಂದು ಆರೋಪ ಮಾಡಿ, ಹತ್ಯೆಯಾಗಿರುವವರ ಹೆಸರಿನ ಪಟ್ಟಿಯನ್ನು ಸಲ್ಲಿಸಿದ್ದರು. 
ಹತ್ಯೆಯಾದವರ ಹೆಸರುಗಳೊಂದಿಗೆ ಓರ್ವ ಬದುಕಿರುವ ವ್ಯಕ್ತಿಯ ಹೆಸರನ್ನೂ ಸೇರಿಸಿದ್ದರು. ಪಟ್ಟಿಯಲ್ಲಿ ಒಟ್ಟು 23 ಜನರ ಹೆಸರುಗಳಿದ್ದವು. ಇದರಲ್ಲಿ ಜೀವಂತ ವ್ಯಕ್ತಿಯ ಹೆಸರನ್ನು ಉಲ್ಲೇಖ ಮಾಡಿದ್ದರು. 20-9-2015ರಂದು ಮೂಡಬಿದರೆಯಲ್ಲಿ ಅಶೋಕ್ ಪೂಜಾರಿ ಎಂಬುವರ ಮೇಲೆ ದಾಳಿ ನಡೆದಿತ್ತು. ದಾಳಿಯಲ್ಲಿ ಗಾಯಗೊಂಡಿದ್ದ ಅಶೋಕ್ ಪೂಜಾರ ನಂತರ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT