ಮೈಸೂರಿನಲ್ಲಿ ನಡೆದ ರ್ಯಾಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ 
ರಾಜಕೀಯ

ವಿಜಯೇಂದ್ರ ಎಫೆಕ್ಟ್: ಬಿಜೆಪಿ ಕಾರ್ಯಕರ್ತರ ಆಕ್ರೋಶದಿಂದ ತಪ್ಪಿಸಿಕೊಳ್ಳಲು ವರುಣಾ ಕಾರ್ಯಕ್ರಮ ರದ್ದುಗೊಳಿಸಿದ ಅಮಿತ್ ಶಾ

ವರುಣಾ ಕ್ಷೇತ್ರದ ಟಿಕೆಟ್ ವಂಚಿತ ಬಿಎಸ್.ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರ ಪರಿಣಾಮದಿಂದಾಗಿ ಅಮಿತ್ ಶಾ ಅವರು ವರುಣಾ ವಿಧಾನಸಭಾ ಕ್ಷೇತ್ರದ 16 ಎಂಬು ಗ್ರಾಮದಲ್ಲಿ ಶನಿವಾರ ನಡೆಸಲು ಉದ್ದೇಶಿಸಲಾಗಿದ್ದ ರೋಡ್ ಹಾಗೂ ಪ್ರಚಾರ ಸಭೆಗಳನ್ನು ಕೊನೆ...

ಮೈಸೂರು: ವರುಣಾ ಕ್ಷೇತ್ರದ ಟಿಕೆಟ್ ವಂಚಿತ ಬಿಎಸ್.ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರ ಪರಿಣಾಮದಿಂದಾಗಿ ಅಮಿತ್ ಶಾ ಅವರು ವರುಣಾ ವಿಧಾನಸಭಾ ಕ್ಷೇತ್ರದ 16 ಎಂಬು ಗ್ರಾಮದಲ್ಲಿ ಶನಿವಾರ ನಡೆಸಲು ಉದ್ದೇಶಿಸಲಾಗಿದ್ದ ರೋಡ್ ಹಾಗೂ ಪ್ರಚಾರ ಸಭೆಗಳನ್ನು ಕೊನೆ ಕ್ಷಣದಲ್ಲಿ ರದ್ದುಗೊಳಿಸಲಾಯಿತು ಎಂದು ಮೂಲಗಳಿಂದ ತಿಳಿದುಬಂದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಬಿಜೆಪಿಯ ಕೆಲ ಕಾರ್ಯಕರ್ತರು ತೀವ್ರ ಅಸಮಾಧಾನಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಹದಿನಾರು ಗ್ರಾಮಕ್ಕೆ ಅಮಿತ್ ಶಾ ಬಂದರೆ ವಿಜಯೇಂದ್ರ ಅವರ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಬಹುದು ಎಂಬ ಕಾರಣಕ್ಕೆ ರದ್ದುಗೊಳಿಸಲಾಯಿತು ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿವೆ. 
ಹದಿನಾರು ಗ್ರಾಮದಲ್ಲಿ ನಿನ್ನೆ ಬೆಳಿಗ್ಗೆ 11.15ರಿಂದ 12.45ರವರೆಗೆ ಪ್ರಚಾರ ಕಾರ್ಯಕ್ರಮ ನಿಗದಿಯಾಗಿತ್ತು. ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಿದ್ಧತೆಗಳೂ ಕೂಡ ನಡೆದಿತ್ತು. ಆದರೆ, ವಿಜಯೇಂದ್ರ ಅವರ ಪರಿಣಾಮದಿಂದಾಗಿ ಕಾರ್ಯಕ್ರಮವನ್ನು ಅನಿವಾರ್ಯವಾಗಿ ರದ್ದು ಮಾಡಲಾಯಿತು ಎಂದು ತಿಳಿದುಬಂದಿದೆ. 
ಬಳಿಕ ಪಕ್ಷದ ವರ್ಚಸ್ಸನ್ನು ಕಾಪಾಡಿಕೊಳ್ಳುವ ಸಲುವಾಗಿ ಪ್ರಚಾಕ ಕಾರ್ಯಕ್ರಮಗಳನ್ನು ಟಿ.ನರಸೀಪುರದಲ್ಲಿ ನಡೆಸಲು ನಿರ್ಧಾರ ಕೈಗೊಳ್ಳಲಾಯಿತು. ಟಿ.ನರಸೀಪುರ ಟೌನ್, ವರುಣಾ ಹಾಗೂ ಟಿ,ನರಸೀಪುರ ವಿಧಾನಸಭಾಕ್ಷೇತ್ರಗಳೆರ ಅಡಿಯಲ್ಲೂ ಬರಲಿದೆ. ಟಿ.ನರಸೀಪುರದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಶಾ ಅವರೊಂದಿಗೆ ತೋಟದಪ್ಪ ಬಸವರಾಜು ಮತ್ತು ಶಂಕರ್ ಅವರು ಸಾಥ್ ನೀಡಿದ್ದರು. 
ಇದಲ್ಲದೆ ಪಿರಿಯಪಟ್ಟಣದಲ್ಲೂ ಅಮಿತ್ ಶಾ ಅವರು ರೋಡ್ ಶೋ ನಡೆಸಿದ್ದರು. ಈ ವೇಳೆ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಹಾಗೂ ಸಂಸದ ಪ್ರತಾಪ್ ಸಿಂಹ ಅವರು ಶಾ ಅವರಿಗೆ ಸಾಥ್ ನೀಡಿದ್ದರು. ರೋಡ್ ಶೋ ವೇಳೆ ಬಿಜೆಪಿ ಕಾರ್ಯಕರ್ರತು ಅಮಿತ್ ಶಾ ಅವರ ಮೇಲೆ ಹೂಗಳನ್ನು ಹಾಕಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪ ಪರ ಘೋಷಣೆಗಳನ್ನು ಕೂಗಿದರು. ಎನ್.ಆರ್.ಮೊಹಲ್ಲಾ, ಅಶೋಕ ರಸ್ತೆ, ಕೆ.ಆರ್.ವಿಧಾನಸಭಾ ಕ್ಷೇತ್ರದಲ್ಲಿರುವ ಬರುವ ದೇವರಾಜ ಮತ್ತು ಕೃಷ್ಣರಾಜ ಮೊಹಲ್ಲಾಗಳಲ್ಲಿ ರ್ಯಾಲಿಗೆ ಅತ್ಯುತ್ತಮ ಪ್ರತಿಕ್ರಿಯೆಗಳು ದೊರಕಿದವು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ