ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಹಿಂಸೆಗೆ ತಿರುಗಿದ ವೈರತ್ವ: ನಾಗನಹಳ್ಳಿಯಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ!

ಗಾಯಾಳುಗಳ ಆರೋಗ್ಯ ವಿಚಾರಿಸುತ್ತಿರುವ ಸಿಎಂ
Shilpa D
Updated On : 7 May 2018, 8:36 am
ಮೈಸೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವಿನ ದ್ವೇಷ ಹಿಂಸಾಚಾರಕ್ಕೆ ತಿರುಗಿದ್ದು,ಶನಿವಾರ ರಾತ್ರಿ ನಡೆದ ಘರ್ಷಣೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ.
ನಾಗನಹಳ್ಳಿ ಹೊರವಲಯದಲ್ಲಿ ಜೆಡಿಎಸ್ ಕಾರ್ಯಕರ್ತರು ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. 
ನಾಗನಹಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ನಡೆಸಿದ ಸಂದರ್ಭದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಜಟಾಪಟಿ ಉಂಟಾಗಿತ್ತು.

Advertisement

Advertisement

ಈ ವೇಳೆ  ಜಿ.ಟಿ ದೇವಗೌಡ ಬೆಂಬಲಿಗರು ದರ್ಶನ್ ಪ್ರಚಾರಕ್ಕೆ ವಿರೋಧ ವ್ಯಕ್ತ ಪಡಿಸಿ ಪ್ರತಿಭಟನೆ ನಡೆಸಿದ್ದರು.
ನಾಗನಹಳ್ಳಿ ಗ್ರಾಮ ಪಂಚಾಯಿತ್ ಸದಸ್ಯ ಲೋಹಿತ್, ಮಾಜಿ ಗ್ರಾಮ ಪಂಚಾಯತಿ ಸದಸ್ಯ ಜಯದೇವ, ನಾಗನಹಳ್ಳಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ವಿದ್ಯಾಶಂತಕ್  ಮತ್ತು ಅರ್ಜುನ್ ಎಂಬುವರು ಗಾಯಗೊಂಡಿದ್ದು,ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.  
ಮೈಸೂರಿನ ನಾಗನಹಳ್ಳಿಯಲ್ಲಿ ನಿನ್ನೆ ದರ್ಶನ್ ಪ್ರಚಾರ ನಡೆಸಿ ಹೋದ ನಂತರ ಗಲಾಟೆ ಮಾಡಿಕೊಂಡಿರುವ ಎರಡೂ ಪಕ್ಷಗಳ ಕಾರ್ಯಕರ್ತರು ಪರಸ್ಪರ ಮಾರಾಮಾರಿ ನಡೆಸಿದ್ದಾರೆ.
ನಾವು ಪ್ರಚಾರದಲ್ಲಿ ತೊಡಗಿದ್ದ ವೇಳೆ ಬೈಕ್ ನಲ್ಲಿ ಬಂದ ಜೆಡಿಎಸ್ ಕಾರ್ಯಕರ್ತರು ಹಲ್ಲೆ ನಡೆಸಿದರು, ಅವರ ಕೈಯಲ್ಲಿ ಲಾಂಗು ಮಚ್ಚುಗಳಿದ್ದವು ಎಂದ ಗಾಯಾಳು ತಿಳಿಸಿದ್ದಾನೆ, 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement