ವಿಧಾನಸಭೆ ಚುನಾವಣೆ: 2 ವರ್ಷಗಳ ನಂತರ ಮತ್ತೆ ಚುನಾವಣಾ ಪ್ರಚಾರ ಕೈಗೊಳ್ಳಲಿರುವ ಸೋನಿಯಾ ಗಾಂಧಿ!
ವಾರಾಣಸಿಯಲ್ಲಿ ಅರ್ಧಕ್ಕೇ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಿದ 2 ವರ್ಷಗಳ ನಂತರ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತೊಮ್ಮೆ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.
ನವದೆಹಲಿ: ವಾರಾಣಸಿಯಲ್ಲಿ ಅರ್ಧಕ್ಕೇ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಿದ 2 ವರ್ಷಗಳ ನಂತರ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತೊಮ್ಮೆ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳಿದ್ದು, ಸೋನಿಯಾ ಗಾಂಧಿ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಬಿಜಾಪುರದಿಂದ ಪ್ರಚಾರ ಕೈಗೊಳ್ಳಲಿದ್ದಾರೆ. ಕರ್ನಾಟಕದಲ್ಲಿ ಸೋನಿಯಾ ಗಾಂಧಿ ಎಷ್ಟು ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿದಿಲ್ಲ.
ಪಕ್ಷದ ಮಾಹಿತಿಯ ಪ್ರಕಾರ ಮೇ.08 ರಂದು ಮಾತ್ರವೇ ಸೋನಿಯಾ ಗಾಂಧಿ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಗುಜರಾತ್, ಉತ್ತರ ಪ್ರದೇಶ, ಪಂಜಾಬ್, ಹಿಮಾಚಲ ಪ್ರದೇಶಗ, ಉತ್ತರಾಖಂಡ್, ಮೇಘಾಲಯ ಚುನಾವಣಾ ಪ್ರಚಾರದಿಂದಲೂ ಸೋನಿಯಾ ಗಾಂಧಿ ದೂರ ಉಳಿದಿದ್ದರು.