ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ
ಕಲಬುರಗಿ: 20 ತಿಂಗಳ ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಅವರ ಜೊತೆಗಿನ ಕಹಿ ಅನುಭವಗಳೇ ಸಾಕು, ಮತ್ತೆ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯವರು ಅಗತ್ಯ ಬಿದ್ದರೆ, ನಮ್ಮ ನಿಯಮಗಳಿಗೆ ಒಪ್ಪಿಕೊಳ್ಳುವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಎಂದು ಹೇಳಿದ್ದರು.
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ ಅವರು, ಕಹಿ ಅನುಭವಗಳನ್ನು ಮತ್ತೆ ಬಯಸುವುದಿಲ್ಲ. ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚಿನ ಬೆಂಬಲಗಳಿದ್ದು, ಬಿಜೆಪಿ 150ಕ್ಕೂ ಹೆಚ್ಚು ಸೀಟುಗಳಲ್ಲಿ ಗೆಲವು ಸಾಧಿಸಲಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಮುಖ್ಯ ದಿನಪತ್ರಿಕೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಾಹೀರಾತು ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಸುದ್ದಿವಾಹಿನಿಯೊಂದು ಭಾನುವಾರ ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಬಹಿರಂಗ ಚರ್ಚೆಗೆ ಸಿದ್ಧತೆ ನಡೆಸಿತ್ತು. ಆದರೆ, ಚರ್ಚೆಗೆ ಸಿದ್ದರಾಮಯ್ಯ ಅವರೇ ಬರಲಿಲ್ಲ. ಅವರ ಜಾಹೀರಾತುಗಳು ಮೂರ್ಖತನದ್ದು ಎಂದು ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರದ್ದು ಅತ್ಯಂತ ದೊಡ್ಡ ಭ್ರಷ್ಟ ಸರ್ಕಾರ. ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಕುಸಿದುಬಿದ್ದಿದೆ. ಪ್ರತೀ 2 ದಿನಗಳಲ್ಲಿ ದಲಿತ ಮಹಿಳೆ ಮೇಲೆ ಅತ್ಯಾಚಾರ ನಡೆಯುತ್ತಿದೆ. 3 ದಿನಗಳಿಗಲ್ಲಿ ಕೊಲೆಗಳಾಗುತ್ತಿವೆ. 5 ವರ್ಷಗಳಲ್ಲಿ 3,500 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics