ಪ್ರಧಾನಿ ಮೋದಿ, ಅಮಿತ್ ಶಾರಿಂದ ಐಟಿ ಇಲಾಖೆ ದುರ್ಬಳಕೆ: ಸಿಎಂ ಸಿದ್ದರಾಮಯ್ಯ
ರಾಜಕೀಯ ಲಾಭಕ್ಕಾಗಿ ಬಿಜೆಪಿ ಆದಾಯ ತೆರಿಗೆ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ....
ಮೈಸೂರು: ರಾಜಕೀಯ ಲಾಭಕ್ಕಾಗಿ ಬಿಜೆಪಿ ಆದಾಯ ತೆರಿಗೆ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಆರೋಪಿಸದ್ದಾರೆ.
ನಿನ್ನೆ ಬಾದಾಮಿಯಲ್ಲಿರುವ ಹೊಸಪೇಟೆ ಶಾಸಕ ಆನಂದ್ ಸಿಂಗ್ ಒಡೆತನದ ಕೃಷ್ಣಾ ಹೆರಿಟೇಜ್ ರೆಸಾರ್ಟ್ ನಡೆದ ಐಟಿ ದಾಳಿ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಸೂಚನೆ ಮೆರೆಗೆ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಮನೆ, ಕಚೇರಿ ಮೇಲೆ ಐಟಿ ದಾಳಿ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ನಾನು ಬಾದಾಮಿಯಿಂದ ಬಂದು ನಾಲ್ಕು ದಿನ ಆಯಿತು. ಈಗ ನಾನು ತಂಗಿದ್ದ ರೆಸಾರ್ಟ್ ಮೇಲೆ ಐಟಿ ದಾಳಿ ನಡೆಸಿರುವುದು ತಮಾಷೆಯಾಗಿದೆ ಎಂದು ವ್ಯಂಗ್ಯವಾಡಿದರು.
ಅವರು ದಾಳಿ ಮಾಡಲಿ ನಾನು ಬೇಡ ಅನ್ನಲ್ಲ. ಆದರೆ ಈಗ ಚುನಾವಣೆ ವೇಳೆ ದಾಳಿ ಮಾಡುವುದು ಸರಿಯಲ್ಲ. ಚುನಾವಣೆ ವೇಳ ಐಟಿ ದಾಳಿ ನಡೆದದ್ದು ನಾನು ಕೇಳೇ ಇಲ್ಲ. ಈ ಹಿಂದೆ ಯಾವ ಸರ್ಕಾರವೂ ಈ ರೀತಿ ಮಾಡಿಲ್ಲ. ಈ ದಾಳಿಯನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ.
ಹುಬ್ಬಳ್ಳಿ ರಸ್ತೆಯಲ್ಲಿರುವ ರೆಸಾರ್ಟ್ನಲ್ಲಿ ನಾಲ್ಕು ದಿನಗಳ ಹಿಂದೆ ಬಾದಾಮಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಸ್ತವ್ಯ ಹೂಡಿದ್ದರು. ಚುನಾವಣೆ ಹಿನ್ನೆಲೆಯಲ್ಲಿ ಕೃಷ್ಣಾ ಹೆರಿಟೇಜ್ ಕಾಂಗ್ರೆಸ್ ಮುಖಂಡರ ಕಾರ್ಯಕ್ಷೇತ್ರವಾಗಿತ್ತು.
ಐಟಿ ಅಧಿಕಾರಿಗಳ ದಾಳಿ ವೇಳೆ ರೆಸಾರ್ಟ್ನಲ್ಲಿ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ವಾಸ್ತವ್ಯ ಹೂಡಿದ್ದರು ಎಂದು ತಿಳಿದುಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.