ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ 
ರಾಜಕೀಯ

2019ರಲ್ಲಿ ದೇಶದ ಪ್ರಧಾನ ಮಂತ್ರಿಯಾಗಲು ಸಿದ್ಧ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ

ದೇಶದ ಪ್ರಧಾನಮಂತ್ರಿಯಾಗಲು ಸಿದ್ಧನಿದ್ದೇನೆಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಮಂಗಳವಾರ ಹೇಳಿದ್ದಾರೆ...

ಬೆಂಗಳೂರು: ದೇಶದ ಪ್ರಧಾನಮಂತ್ರಿಯಾಗಲು ಸಿದ್ಧನಿದ್ದೇನೆಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಮಂಗಳವಾರ ಹೇಳಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ ವೊಂದರಲ್ಲಿ ಆಯೋಜನೆ ಮಾಡಲಾಗಿದ್ದ ಸಮೃದ್ಧ ಭಾರತ ಲೋಕಾರ್ಪಣೆಗೊಳಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಅತೀದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದೇ ಆದರೆ, ದೇಶದ ಪ್ರಧಾನಮಂತ್ರಿಯಾಗಲು ಸಿದ್ಧ ಎಂದು ಹೇಳಿದ್ದಾರೆ. 
ಬಿಜೆಪಿ ವ್ಯವಸ್ಥಿತವಾಗಿ ಪ್ರಜಾಪ್ರಭುತ್ವವನ್ನು ಅಸ್ಥಿರಗೊಳಿಸುತ್ತಿದೆ. ಮೋದಿಯವರು ನಿರಂತರವಾಗಿ ಕರ್ನಾಟಕ ರಾಜ್ಯಕ್ಕೆ ಬರುತ್ತಿದ್ದಾರೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ಕರ್ನಾಟಕ ರಾಜ್ಯದಲ್ಲಿ ಭ್ರಷ್ಟ ವ್ಯಕ್ತಿಯನ್ನೇಕೆ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಣೆ ಮಾಡಿದಿರಿ? ರಾಜ್ಯದ ಜನತೆಯ ರೂ.35,000 ಲೂಟಿ ಹೊಡೆದ ರೆಡ್ಡಿ ಸಹೋದರರಿಗೇಕೆ ಬಿಜೆಪಿ ಟಿಕೆಟ್ ನೀಡಿದೆ? ಈ ಬಗ್ಗೆ ಮೋದಿಯವರು ಉತ್ತರ ನೀಡಬೇಕೆಂದು ಆಗ್ರಹಿಸಿದ್ದಾರೆ. 
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಕೊಲೆ ಪ್ರಕರಣದ ಆರೋಪಿಯಾಗಿದ್ದಾರೆ. ಈ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಅಮಿತ್ ಶಾ ವಿಶ್ವಾಸಾರ್ಹ ವ್ಯಕ್ತಿಯಲ್ಲ. ಅವರ ಹಿನ್ನಲೆಯನ್ನು ನೋಡಿದರೂ, ಅವರ ಜವಾಬ್ದಾರಿಗಳೇನಿವೆ?.... ಅಮಿತ್ ಶಾ ಹೇಗೆ ರಾಜಕೀಯ ಮಾಡುತ್ತಿದ್ದಾರೆ? ಕೊಲೆ ಆರೋಪವನ್ನು ಹೊತ್ತುಕೊಂಡಿರುವ ವ್ಯಕ್ತಿ ಬಿಜೆಪಿಯ ರಾಷ್ಟ್ರಾಧ್ಯಕ್ಷರಾಗಿದ್ದು, ಪಕ್ಷ ಪ್ರಮಾಣಿಕತೆಯ ಬಗ್ಗೆ ಮಾತನಾಡುತ್ತದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್