ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ 
ರಾಜಕೀಯ

ಕಾಂಗ್ರೆಸ್ ಅಧಿಕಾರ ದುರುಪಯೋಗ ಪಡಿಸಿಕೊಂಡು ಚುನಾವಣಾ ಅಕ್ರಮದಲ್ಲಿ ತೊಡಗಿದೆ: ಬಿಜೆಪಿ

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆ ಗೆಲುವಿಗಾಗಿ ವಾಮಮಾರ್ಗ ಅನುಸರಿಸುತ್ತಿದ್ದು, ಅಧಿಕಾರ ದುರುಪಯೋಗ ಪಡಿಸಿಕೊಂಡು ಚುನಾವಣಾ ಅಕ್ರಮದಲ್ಲಿ ತೊಡಗಿದೆ ಎಂದು ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆ ಗೆಲುವಿಗಾಗಿ ವಾಮಮಾರ್ಗ ಅನುಸರಿಸುತ್ತಿದ್ದು, ಅಧಿಕಾರ ದುರುಪಯೋಗ ಪಡಿಸಿಕೊಂಡು ಚುನಾವಣಾ ಅಕ್ರಮದಲ್ಲಿ ತೊಡಗಿದೆ ಎಂದು ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಅತ್ತ ಬಾದಾಮಿಯ ರೆಸಾರ್ಟ್ ನಲ್ಲಿ ಐಟಿ ದಾಳಿಯಾದ ಬೆನ್ನಲ್ಲೇ ಇತ್ತ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಅಪಾರ ಪ್ರಮಾಣದ ಮತದಾರರ ಗುರುತಿನ ಚೀಟಿ ಪತ್ತೆಯಾಗಿತ್ತು. ಈ ಪ್ರಕರಣ ಕರ್ನಾಟಕದಲ್ಲಿ ಹಲವು ರಾಜಕೀಯ ಬೆಳವಣಿಗೆಗೆ ಕಾರಣವಾಗಿದ್ದು, ತಡರಾತ್ರಿಯೇ ವಿವಿಧ ರಾಜಕೀಯ ಪಕ್ಷಗಳು ತುರ್ತು ಸುದ್ದಿಗೋಷ್ಠಿ ನಡೆಸಿ ಇತರೆ ಪಕ್ಷಗಳ ಮೇಲೆ ಆರೋಪ ಹೊರಿಸಿವೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ತಡರಾತ್ರಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹಿರಿಯ ಮುಖಂಡ ಹಾಗೂ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು, ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದರು. ಆಪಾರ್ಟ್ ಮೆಂಟ್ ನಲ್ಲಿ ಪತ್ತೆಯಾದ ಗುರುತಿನ ಚೀಟಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರಿದವು ಎಂದು ಹೇಳಿದ ಅವರು, ಆಢಳಿತಾರೂಢ ಕಾಂಗ್ರೆಸ್ ಪಕ್ಷ ತನ್ನ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡಿರುವ ಬಾದಾಮಿಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ. ಇದರ ಬೆನ್ನಲ್ಲೇ ಇತ್ತ ಬೆಂಗಳೂರಿನಲ್ಲಿ ಸಾವಿರಾರು ಮತದಾರರ ಗುರುತಿನ ಚೀಟಿಗಳು ಪತ್ತೆಯಾಗಿದೆ. ಇದರ ಹಿಂದೆ ಖಂಡಿತಾ ಕಾಂಗ್ರೆಸ್ ಕೈವಾಡವಿದೆ. ಚುನಾವಣಾ ಆಯೋಗ ಈ ಎರಡೂ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಬಾದಾಮಿ ವಿಶೇಷ ಚುನಾವಣಾ ಅಧಿಕಾರಿಯನ್ನು ನೇಮಕ ಮಾಡಿ, ಪ್ಯಾರಾ ಮಿಲಿಟರಿ ಪಡೆಗಳನ್ನು ನಿಯೋಜಿಸಬೇಕು ಎಂದು ಜಾವಡೇಕರ್ ಆಗ್ರಹಿಸಿದರು.
ಅಂತೆಯೇ ಕಾಂಗ್ರೆಸ್ ಪಕ್ಷ ತನ್ನ ದುರಾಡಳಿತದಿಂದ ಜನ ಬೆಂಬಲ ಕಳೆದುಕೊಂಡಿದೆ. ಹೀಗಾಗಿ ವಾಮಮಾರ್ಗದಲ್ಲಿ ಅಧಿಕಾರ ಹಿಡಿಯಲು ಕಾಂಗ್ರೆಸ್ ಹರಸಾಹಸ ಮಾಡುತ್ತಿದೆ. ಹೀಗಾಗಿ ರಾಜರಾಜೇಶ್ವರಿ ನಗರ ಚುನಾವಣೆಯನ್ನು ಮುಂದೂಡಿಕೆ ಮಾಡಬೇಕು ಎಂದು ಆಗ್ರಹಿಸುತ್ತೇವೆ ಎಂದು ಜಾವಡೇಕರ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!