ಹಣ ಹಂಚಿಕೆ ಆರೋಪ: ರಮೇಶ್ ಜಾರಕಿಹೊಳಿ ವಿರುದ್ದ ಕೇಸ್ ದಾಖಲಿಸಿದ ಚುನಾವಣಾ ಆಯೋಗ
ಮತದಾರರಿಗೆ ಲಂಚ ಪ್ರಕರಣ ಸಂಬಂಧ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಚುನಾವಣಾ ಆಯೋಗ ದೂರು ದಾಖಲಿಸಿದೆ. ...
ಗೋಕಾಕ್: ಮತದಾರರಿಗೆ ಲಂಚ ಪ್ರಕರಣ ಸಂಬಂಧ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಚುನಾವಣಾ ಆಯೋಗ ದೂರು ದಾಖಲಿಸಿದೆ.
ರಮೇಶ್ ಜಾರಕಿಹೊಳಿ ಮತದಾರರಿಗೆ ಹಣ ಹಂಚುತ್ತಿದ್ದರು ಯಾವುದೇ ಕಾನೂನು ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಗೋಕಾಕ್ ನಲ್ಲಿ ಪ್ರತಿಭಟನೆ ನಡೆಸಿದರು. ಮತದಾರರಿಗೆ ಹಣ ಹಂಚುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.
ಕೊನ್ನೂರು ಗ್ರಾಮದಲ್ಲಿ ದುರ್ಗಾದೇವಿ ದೇವಾಲಯಕ್ಕೆ ಭೇಟಿ ನೀಡಿದ ಸಚಿವರು ಮತದಾರರಿಗೆ ಹಣ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ, ಸಂಬಂಧ ಪಟ್ಟವರು ಕಾನೂನು ಕ್ರಮ ಕೈಗೊಂಡ ಮೇಲೆ ಪ್ರತಿಭಟನೆ ವಾಪಸ್ ತೆಗೆದುಕೊಳ್ಳಲಾಯಿತು,
ಇದೇ ವೇಳೆ ಬಿಜೆಪಿ ಅಭ್ಯರ್ಥಿ ಅಶೋಕ್ ಪೂಜಾರಿ ಚುನಾವಣಾ ಆಯೋಗಕ್ಕೆ ಮೂರು ಪುಟಗಳ ಪತ್ರ ಬರೆದಿದ್ದಾರೆ, ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ, ವಿಡಿಯೋ ಪರಿಶೀಲನೆ ನಡೆಸಿದ ನಂತರ ಚುನಾವಣಾ ಆಯೋಗ ಅಧಿಕಾರಿ ದಿನೇಶ್ ಕುಮಾರ್ ಗೋಕಾಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಿಲಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.