ಸಂಗ್ರಹ ಚಿತ್ರ 
ರಾಜಕೀಯ

ಇದು ಸುಳ್ಳು ಭರವಸೆ ಮತ್ತು ಪ್ರಾಮಾಣಿಕ ಸರ್ಕಾರದ ನಡುವಿನ ಹೋರಾಟ: ಮಲ್ಲಿಕಾರ್ಜುನ ಖರ್ಗೆ

ಪ್ರಸಕ್ತ ಕರ್ನಾಟಕ ವಿಧಾನಸಭೆ ಚುನಾವಣೆ ಸುಳ್ಳು ಭರವಸೆ ಮತ್ತು ನುಡಿದಂತೆ ನಡೆವ ಪ್ರಾಮಾಣಿಕ ಸರ್ಕಾರದ ನಡುವಿನ ಹೋರಾಟವಾಗಿದೆ ಎಂದು ಕಾಂಗ್ರೆಸ್ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಬೆಂಗಳೂರು: ಪ್ರಸಕ್ತ ಕರ್ನಾಟಕ ವಿಧಾನಸಭೆ ಚುನಾವಣೆ ಸುಳ್ಳು ಭರವಸೆ ಮತ್ತು ನುಡಿದಂತೆ ನಡೆವ ಪ್ರಾಮಾಣಿಕ ಸರ್ಕಾರದ ನಡುವಿನ ಹೋರಾಟವಾಗಿದೆ ಎಂದು ಕಾಂಗ್ರೆಸ್ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಹಾಲಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಖಚಿತ. ಪೂರ್ಣ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಲಿದ್ದೇವೆ ಎಂದು ಹೇಳಿದ್ದಾರೆ.
ಪ್ರಸಕ್ತ ಚನಾವಣೆಗೆ ಸಂಬಂಧಿಸಿದಂತೆ ಹಾಲಿ ಪರಿಸ್ಥಿತಿ ಹೇಗಿದೆ?
ಚುನಾವಣೆ ಘೋಷಣೆಯಾದ ಬಳಿಕ ರಾಜ್ಯದ ಬಹುತೇಕ ಭಾಗಗಳಲ್ಲಿ ನಾನು ಸಂಚರಿಸಿದ್ದೇನೆ. ಎಲ್ಲ ಪ್ರದೇಶಗಳಲ್ಲಿ ಕಾಂಗ್ರೆಸ್ ಪರ ಒಲವಿದೆ. ಪಕ್ಷದ ಯಾವುದೇ ಪ್ರಚಾರಕ್ಕೆ ಜನ ಸ್ವಯಂ ಪ್ರೇರಿತರಾಗಿ ಪಾಲ್ಗೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಪಕ್ಷ ಸರ್ಕಾರ ರಚನೆ ಮಾಡಲಿದೆ.
ಕಾಂಗ್ರೆಸ್ ಪರವಾದ ಪ್ರಮುಖಾಂಶಗಳು ಯಾವುವು?
ಕೆಲ ಬಿಜೆಪಿ ನಾಯಕರು ಸಂವಿಧಾನ ಬದಲಿಸುವ ಕುರಿತು ಮಾತನಾಡುತ್ತಿದ್ದಾರೆ. ಈ ಚುನಾವಣೆ ಸಂವಿಧಾನ ಮತ್ತು ಪ್ರಜಾಪ್ರಭುತ್ವ ರಕ್ಷಣೆಗಾಗಿ ನಡೆಯುತ್ತಿರುವ ಹೋರಾಟ. ಹಿಂದುಳಿದ ವರ್ಗಗಳ ಜನರ ಅಭಿವೃದ್ಧಿ ಕುರಿತು ಬಿಜೆಪಿಗೆ ಎಳ್ಳಷ್ಟೂ ಕಾಳಜಿ ಇಲ್ಲ. ಪ್ರಣಾಳಿಕೆಯಲ್ಲೂ  ಈ ಬಗ್ಗೆ ಪ್ರಸ್ತಾಪವಿಲ್ಲ. ಆದರ ನಮ್ಮ ಸರ್ಕಾರ ಹಿಂದುಳಿದ ವರ್ಗಗಳಿಗೆ ಸಾಕಷ್ಟು ಯೋಜನೆ ಕಲ್ಪಿಸಿದೆ. ಅಲ್ಲದೆ ಈ ಹಿಂದಿನ ಬಜೆಟ್ ನಲ್ಲಿ ಸಾಕಷ್ಟು ಅನುದಾನ ನೀಡಿದೆ. ಹೈದರಾಬಾದ್ ಕರ್ನಾಟಕದ ಭಾಗದ ಜನತೆ ಕಲಂ 371ಜೆ ಅನ್ವಯ ಸಂಪೂರ್ಣ ಲಾಭ ಪಡೆಯುವಂತೆ ಕ್ರಮಗಳನ್ನು ಕೈಗೊಂಡಿದ್ದೇವೆ. ನಾವು ಕೊಟ್ಟ ಮಾತಿನಂತೆ ನಡೆದಿದ್ದೇವೆ ಎಂದು ಧೈರ್ಯದಿಂದ ಹೇಳುತ್ತೇವೆ.
ಗುಜರಾತ್ ನಲ್ಲಿ ಪ್ರಚಾರ ಮಾಡಿದಂತೆ ಪ್ರಧಾನಿ ಮೋದಿ ಕರ್ನಾಟಕದಲ್ಲಿ ಪ್ರಚಾರ ಮಾಡುತ್ತಿದ್ದಾರೆ..
ನರೇಂದ್ರ ಮೋದಿ ಅವರ ಪ್ರಚಾರ ಹೇಗಿದೆ ಎಂದರೆ ತಾವೇ ಸಿಎಂ ಅಭ್ಯರ್ಥಿಯೇನೋ ಎಂಬಂತೆ ಪ್ರಚಾರ ಮಾಡುತ್ತಿದ್ದಾರೆ. ಅವರು ತಾವೊಬ್ಬ ಪ್ರಧಾನಿ ಎಂಬುದನ್ನು ಮರೆತಿದ್ದಾರೆ. ಈ ಹಿಂದೆ ಲೋಕಸಭಾ ಚುನಾವಣೆ ವೇಳೆ ಕಪ್ಪುಹಣ ವಾಪಸ್ ತರುವುದಾಗಿ ಹೇಳಿದ್ದರು. ದೇಶದ ಪ್ರತೀ ಪ್ರಜೆಯ ಖಾತೆಗೆ 15 ಲಕ್ಷ ಠೇವಣಿ ಮಾಡುವುದಾಗಿ ಹೇಳಿದ್ದರು. ಅಂತೆಯೇ ದೇಶದಲ್ಲಿ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದೂ ಭರವಸೆ ನೀಡಿದರು. ಆದರೆ ಇವು ಯಾವುದೂ ಆಗಿಲ್ಲ. ಆದರೆ ಅಗತ್ಯ ವಸ್ತುಗಳು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಈ ಸರ್ಕಾರದ ಸಾಧನೆಯಾಗಿದೆ. ಕಳೆದ ಮೂರು ವರ್ಷಗಳಲ್ಲಿ ಕಚ್ಛಾತೈಲ ಬೆಲೆಯಲ್ಲಿ ಭಾರಿ ಪ್ರಮಾಣದ ಇಳಿಕೆಯಾಗಿದೆ. ಆದರೆ ದೇಶದಲ್ಲಿ ಮಾತ್ರ ಪೆಚ್ರೋಲ್ ಬೆಲೆ ಇಳಿಕೆಯಾಗಿಲ್ಲ
ಮೋದಿ ಬಿಜೆಪಿ ಗೆಲುವಿನ ಅಂಶವಾಗಬಹುದು ಎಂದು ನಿಮಗನ್ನಿಸುವುದಿಲ್ಲವೇ?
ನರೇಂದ್ರ ಮೋದಿಕೇವಲ ಮಾತನಾಡುತ್ತಾರೆ. ಆದರೆ ಅವರು ಯಾವ ಕೆಲಸ ಮಾಡಿದ್ದಾರೆ. ಆದರೆ ನಾವು ಕರ್ನಾಟಕದಲ್ಲಿ ಮತಯಾಚನೆಗೆ ತೆರಳಿದರೆ ಜನರೇ ನಾವು ಮಾಡಿರುವ ಕೆಲಸಗಳ ಬಗ್ಗೆ ಮಾತನಾಡುತ್ತಿದ್ದಾರೆ. ಮತ ಕೇಳುವಾಗ ನಾವು ದೈರ್ಯದಿಂದ ನಾವು ಮಾಡಿರುವ ಕೆಲಸಗಳನ್ನು ವಿವರಿಸುತ್ತೇವೆ. ಆದರೆ ಅವರು ಮತ ಕೇಳುವಾಗ ಕಾಂಗ್ರೆಸ್ ಪಕ್ಷವನ್ನು ದೂಷಿಸುತ್ತಾರೆಯೇ ಹೊರತು ತಾವು ಮಾಡಿರುವ ಕೆಲಸದ ಕುರಿತು ಮಾತನಾಡುವುದಿಲ್ಲ. ಕಾಂಗ್ರೆಸ್ ಪಕ್ಷ ಕುಟುಂಬ ರಾಜಕೀಯ ಮಾಡುತ್ತದೆ ಎಂದು ಆರೋಪಿಸುತ್ತಾರೆ. ಆದರೆ ಬಿಜೆಪಿ ಏಕೆ ಒಂದು ಕುಟುಂಬದ ಹಲವರಿಗೆ ಟಿಕೆಟ್ ನೀಡಿದೆ?
ಸಮೀಕ್ಷೆಗಳು ಅತಂತ್ರ ವಿಧಾನಸಭೆ ಕುರಿತು ಸುಳಿವು ನೀಡಿದೆ. ಒಂದು ವೇಳೆ ಹಾಗಾದರೆ ಜೆಡಿಎಸ್ ನೊಂದಿಗೆ ಕೈ ಜೋಡಿಸುತ್ತೀರಾ?
ರಾಜ್ಯದಲ್ಲಿ ಜೆಡಿಎಸ್ ಮುಖಂಡರು ಅತಂಹ ಪರಿಸ್ಥಿತಿ ಇದೆ ಎಂದು ಬಿಂಬಿಸಬಹುದು. ಬಿಜೆಪಿ ಕೂಡ ಕಾಂಗ್ರೆಸ್ ಪಕ್ಷ ಬಹುಮತ ಪಡೆಯುವುದಿಲ್ಲ ಎಂದು ಪ್ರಚಾರ ಮಾಡಬಹುದು. ಆದರೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಪ್ರಣಾಳಿಕೆಯಲ್ಲಿ ನಾವು ನೀಡಿದ್ದ ಅಷ್ಟೂ ಭರವಸೆಗಳನ್ನೂ ಈಡೇರಿಸಿದ್ದೇವೆ.
ಬಿಜೆಪಿ ಪಕ್ಷ ಕಾಂಗ್ರೆಸ್ ವಿರುದ್ದ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದು, ಸ್ವಚ್ಛ ಸರ್ಕಾರ ನೀಡುವ ಭರವಸೆ ನೀಡುತ್ತೆದೆ.
ನಿಜಕ್ಕೂ ಇದು ನಗು ತರಿಸುವಂತಹ ಪ್ರಶ್ನೆ.. ಯಾವ ಪಕ್ಷ ಸ್ವಚ್ಛ ಮತ್ತು ಭ್ರಷ್ಟಾಚಾರ ರಹಿತ ಸರ್ಕಾರ ನೀಡುವ ಭರವಸೆ ನೀಡುತ್ತಿದೆಯೋ ಅದೇ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಗಳು ಭ್ರಷ್ಟಾಚಾರ ಆರೋಪದಿಂದ ಜೈಲಿಗೆ ಹೋಗಿ ಬಂದಿದ್ದವರು. ಗಣಿ ಸಂಪತ್ತನ್ನು ಲೂಟಿ ಮಾಡಿದ ಕುಟುಂಬಸ್ಥರಿಗೆ ಟಿಕೆಟ್ ನೀಡಿದ ಪಕ್ಷವದು. ಅಮಿತ್ ಶಾ ಜನಾರ್ಧನ ರೆಡ್ಡಿಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಹೇಳುತ್ತಾರೆ. ಅದರೆ ಅದೇ ಜನಾರ್ಧನ ರೆಡ್ಡಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಾರೆ. ಅದೇ ರೆಡ್ಡಿ ಸಹೋದರರಿಗೆ ಬಿಜೆಪಿ ಪಕ್ಷ ಟಿಕೆಟ್ ನೀಡಿದೆ. ಇವೆಲ್ಲವನ್ನೂ ರಾಜ್ಯದ ಜನತೆ ನೋಡುತ್ತಿದ್ದಾರೆ. ಕಳೆದ ಐದು ವರ್ಷಗಳ ಕಾಂಗ್ರೆಸ್ ಆಡಳಿತ ಮತ್ತು ಅದಕ್ಕೂ ಮೊದಲಿನ ಮೂರು ಸಿಎಂಗಳ ಬಿಜೆಪಿ ದುರಾಡಳಿತವನ್ನು ಜನತೆ ಮರೆತಿಲ್ಲ. ಬಿಜೆಪಿಗೆ ಭ್ರಷ್ಟಾಚಾರದ ಕುರಿತು ಮಾತನಾಡುವ ನೈತಿಕತೆಯೇ ಇಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್