'ಕೈ' ಬಿಟ್ಟು ಬಿಜೆಪಿ ಸೇರಿದ ನಟಿ ಭಾವನಾ!
ಸ್ಯಾಂಡಲ್ವುಡ್ ನಟಿ, ಕಾಂಗ್ರೆಸ್ ಮುಖಂಡೆ ಭಾವನಾ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ..
ಬೆಂಗಳೂರು: ಸ್ಯಾಂಡಲ್ವುಡ್ ನಟಿ, ಕಾಂಗ್ರೆಸ್ ಮುಖಂಡೆ ಭಾವನಾ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಭಾವನಾ ಅವರು ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಕಾಂಗ್ರೆಸ್ ನಿಂದ ಟಿಕೆಟ್ ಸಿಗದಿದ್ದರಿಂದ ಪಕ್ಷಕ್ಕೆ ರಾಜಿನಾಮೆ ನೀಡಿ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ನೋಡಿಕೊಳ್ಳುತ್ತಿರುವ ಮುರುಳಿಧರ್ ರಾವ್ ಸಮ್ಮುಖದಲ್ಲಿ ಭಾವನಾ ಬಿಜೆಪಿಗೆ ಸೇರ್ಪಡೆಗೊಂಡರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.