ಬಿ.ಎಸ್ ಯಡಿಯೂರಪ್ಪ 
ರಾಜಕೀಯ

ರಾಜ್ಯವನ್ನೇ ಗೆಲ್ಲುವ ವಿಶ್ವಾಸ: ಶಿಕಾರಿಪುರದಲ್ಲಿ ಬಿಎಸ್ ವೈ ಕೇವಲ ಒಂದು ದಿನ ಪ್ರವಾಸ!

ರಾಜ್ಯದ ಹಲವು ಜಿಲ್ಲೆಗಳ ಪ್ರವಾಸ ಮುಗಿಸಿ ಬಂದಿರುವ ಯಡಿಯೂರಪ್ಪ ಕಳೆದ ವರ್ಷದ ಜೂನ್ ನಿಂದ ಜನ ಸಂಪರ್ಕ ಅಭಿಯಾನ ಮತ್ತು ಪರಿವರ್ತನಾ ಯಾತ್ರೆ ...

ಶಿಕಾರಿಪುರ: ಶಿಕಾರಿಪುರದ ಹಾರೋಗೊಪ್ಪ ರಾಜ್ಯ ಹೆದ್ದಾರಿಯಲ್ಲಿ ಮಕ್ಕಳು, ವೃದ್ದರು ಸೇರಿದಂತೆ ರಸ್ತೆ ಬದಿಯಲ್ಲಿ ಸೇರಿದ್ದ  ನೂರಾರು ಮಂದಿ  ಕೈಯ್ಯಲ್ಲಿ ಹೂವಿನ ಹಾರ, ಹಾಗೂ ನಿಂಬೆ ಹಣ್ಣು ಹಿಡಿದು ನಿಂತಿದ್ದರು. ಬಿಜೆಪಿ ಧ್ವಜ ಹಿಡಿದು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಯಡಿಯೂರಪ್ಪ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು.
ರಾಜ್ಯದ ಹಲವು ಜಿಲ್ಲೆಗಳ ಪ್ರವಾಸ ಮುಗಿಸಿ ಬಂದಿರುವ ಯಡಿಯೂರಪ್ಪ  ಕಳೆದ ವರ್ಷದ ಜೂನ್ ನಿಂದ ಜನ ಸಂಪರ್ಕ ಅಭಿಯಾನ ಮತ್ತು ಪರಿವರ್ತನಾ ಯಾತ್ರೆ ಸೇರಿದಂತೆ ಲೆಕ್ಕವಿಲ್ಲದಷ್ಟು ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸಿದ್ದರು. ಚುನಾವಣೆ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಕ್ಷೇತ್ರಕ್ಕೆ ಆಗಮಿಸಿದ ಯಡಿಯೂರಪ್ಪ ಶಿಕಾರಿ ಪುರದಲ್ಲಿ ಪ್ರಚಾರ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಜೊತೆ ರಾಜ್ಯಾದ್ಯಂತ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದರು. ತಮ್ಮ ಸ್ವಕ್ಷೇತ್ರದಲ್ಲಿ ಪ್ರಚಾರ ಮಾಡಲು ಬಿಜೆಪಿ ಕಾರ್ಯಕರ್ತರಿಗೆ ತಿಳಿಸಿದ್ದರು. 
1983 ರಿಂದ ಯಡಿಯೂರಪ್ಪ ಶಿಕಾರಿರಪುರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ, 7 ಬಾರಿಯ ಚುನಾವಣೆಗಳಲ್ಲಿ ಒಮ್ಮೆ ಮಾತ್ರ ಯಡಿಯೂರಪ್ಪ ಸೋತಿದ್ದರು, 1999 ರಲ್ಲಿ ಬಿಎಸ್ ವೈ ಸೋತಿದ್ದರು. ಆದರೆ ಈ ಬಾರಿಯ ಚುನಾವಣೆಯಲ್ಲಿ ಯಡಿಯೂರಪ್ಪ ಸೋಲಲು ಯಾವುದೇ ಕಾರಣವಿಲ್ಲ,
ಇಂಥ ಆತ್ಮವಿಶ್ವಾಸದಿಂದಾಗಿ ಕೇವಲ ಒಂದು ದಿನ ಮಾತ್ರ ಶಿಕಾರಿಪುರದಲ್ಲಿ ಪ್ರಚಾರ ನಡೆಸಿದ್ದಾರೆ. ಒಂದೂವರೆ ದಿನದಲ್ಲಿ ಹಲವು ದೇವಾಲಯ ಹಳ್ಳಿಗಳಿಗೆ ಭೇಟಿ ನೀಡಿ ರೋಡ್ ಶೋ ನಡೆಸಲಿದ್ದಾರೆ, 2013ರ ಚುನಾವಣೆಯಲ್ಲಿ ಕೆಜೆಪಿಯಿಂದ ಸ್ಪರ್ದಿಸಿದ್ದ ಯಡಿಯೂರಪ್ಪ 24,425 ಮತಗಳಿಂದ ಗೆದ್ದಿದ್ದರು, ಆದರೆ ಈ ಬಾರಿ 50 ಸಾವಿರ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ರೋಡ್ ಶೋ ನಲ್ಲಿ ಭಾಗವಹಿಸಿದ ಯಡಿಯೂರಪ್ಪ ಅವರಿಗೆ ಹೂವಿನ ಹಾರ ಹಾಕಿ ಆರತಿ ಎತ್ತಿ ಸ್ವಾಗತಿಸಲಾಯಿತು. ಈ ವೇಳೆ ಮಾತನಾಡಿದ ಯಡಿಯೂರಪ್ಪ 10 ಮತಗಳು ಕೂಡ ವ್ಯತ್ಯಾಸ ಆಗಬಾರದು ಎಂದು ಜನರಲ್ಲಿ ಮನವಿ ಮಾಡಿದರು. 
ರೋಡ್ ಶೋ ನಲ್ಲಿ ಭಾಗವಹಿಸಿದ್ದ ಯಡಿಯೂರಪ್ಪ ಪ್ರತಿ 15 ನಿಮಿಷಕ್ಕೆ ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು, ಜೋಳಕ್ಕೆ ಕ್ವಿಂಟಾಲ್ ಗೆ 1,500 ರೂ ನೀಡಿ ಖರೀದಿಸುವ ಭರವಸೆ ವ್ಯಕ್ತ ಪಡಿಸಿದರು ಕಳೆದ 40 ವರ್ಷಗಳಿಂದ ನಾನು ಜನರ ಪರವಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ, ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಂದ ಜನವರು ಸಂತಸ ಗೊಂಡಿದ್ದಾರೆ, ಅವರಿಗಾಗಿ ನಾನು ಮತ್ತಷ್ಟು ಕೆಲಸ ಮಾಡಬೇಕು ಎಂದು ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!