ಪತ್ತೆಯಾದ ವೋಟರ್ ಐಡಿ, ಶಾಸಕ ಮುನಿರತ್ನ 
ರಾಜಕೀಯ

ವೋಟರ್ ಐಡಿ ಪತ್ತೆ ಪ್ರಕರಣ: ರಾಜರಾಜೇಶ್ವರಿನಗರ ಚುನಾವಣೆ ಮುಂದೂಡಿಕೆ

ಅಪಾರ್ಟ್​ವೆುಂಟ್​ವೊಂದರಲ್ಲಿ ಸುಮಾರು 10 ಸಾವಿರ ಮತದಾರರ ಗುರುತಿನ ಚೀಟಿಗಳ ಪತ್ತೆಯಾದ ಹಿನ್ನೆಲೆಯಲ್ಲಿ...

ಬೆಂಗಳೂರು: ಅಪಾರ್ಟ್​ವೆುಂಟ್​ವೊಂದರಲ್ಲಿ ಸುಮಾರು 10 ಸಾವಿರ ಮತದಾರರ ಗುರುತಿನ ಚೀಟಿಗಳ ಪತ್ತೆಯಾದ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ. 
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಟ್ರಂಕ್ ನಲ್ಲಿ 95 ಲಕ್ಷ ರುಪಾಯಿ ಹಣ ಪತ್ತೆಯಾದ ಹಿನ್ನೆಯಲ್ಲಿ ಆ ಕ್ಷೇತ್ರದ ಚುನಾವಣೆಯನ್ನು ಮೇ ತಿಂಗಳ 28ಕ್ಕೆ  ಮುಂದೂಡಲಾಗಿದೆ ಎಂದು  ರಾಜ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ತಿಳಿಸಿದ್ದಾರೆ.
ನಾಳೆ ರಾಜ್ಯದ 222 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಆದರೆ ಆರ್ .ಆರ್.ನಗರ ಕ್ಷೇತ್ರದ ಚುನಾವಣೆ ಮೇ28ರಂದು ನಡೆಯಲಿದ್ದು, ಮೇ 31ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಸಂಜೀವ್ ಕುಮಾರ್ ಹೇಳಿದ್ದಾರೆ.
ವೋಟರ್ ಐಡಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಮುನಿರತ್ನ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಜಾಲಹಳ್ಳಿಯ ಎಸ್ ಎಲ್ ವಿ ಅಪಾರ್ಟ್​ವೆುಂಟ್ ನಲ್ಲಿ 9746 ಮತದಾರರ ಗುರುತಿನ ಚೀಟಿ, ಹಣ, ಐದು ಲ್ಯಾಪ್ ಟಾಪ್, ಒಂದು ಪ್ರಿಂಟರ್ ಅನ್ನು ಚುನಾವಣಾ ಅಧಿಕಾರಿಗಳು ಮಂಗಳವಾರ ಜಪ್ತಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT