ಸಿದ್ದರಾಮಯ್ಯ 
ರಾಜಕೀಯ

ಮತದಾರರಿಗೆ ಸಿದ್ದರಾಮಯ್ಯ ಹಣ ಹಂಚುತ್ತಿದ್ದಾರೆ: ಜೆಡಿಎಸ್ ಆರೋಪ

ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಮತದರಾರಿಗೆ ಹಣ ಮತ್ತು ಉಡುಗೊರೆಗಳನ್ನು ನೀಡುತ್ತಿದ್ದಾರೆ...

ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ  ಮೈಸೂರಿನಲ್ಲಿ ಮತದರಾರಿಗೆ  ಹಣ ಮತ್ತು ಉಡುಗೊರೆಗಳನ್ನು ನೀಡುತ್ತಿದ್ದಾರೆ ಎಂದು ಜೆಡಿಎಸ್ ದೂರು ನೀಡಿದೆ.
ರಾಜ್ಯ ಚುನಾವಣಾ ಆಯೋಗದಲ್ಲಿ ದೂರು ದಾಖಲಿಸಿರುವ ಜೆಡಿಎಸ್, ಸಿದ್ದರಾಮಯ್ಯ ಗುರುವಾರ ಸಂಜೆ 6 ಗಂಟೆ ನಂತರ ತಮ್ಮ ಬೆಂಬಲಿಗರೊಂದಿಗೆ ಮನೆ ಮನೆ ಪ್ರಚಾರಕ್ಕೆ ತೆರಳಿ, ಅಲ್ಲಿ ಹಣ ನೀಡಿದ್ದಾರೆ ಎಂದು ದೂರಿದೆ.
ಸಿಎಂ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಮ್ಮ ಪಕ್ಷದ  ಎಲೆಕ್ಷನ್ ಏಜೆಂಟ್ ಜಿಲ್ಲಾ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಆದರೆ ಚುನವಣಾಧಿಕಾರಿಗಳು ನಮ್ಮ ದೂರಿಗೆ ಸರಿಯಾಗಿ ಪ್ರತಿಕ್ರಿಯಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಜೆಡಿಎಸ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಜೆಡಿಎಸ್ ಅಭ್ಯರ್ಥಿ ಅಪಾರ ಪ್ರಮಾಣದಲ್ಲಿ ಜನರಿಗೆ ಮತಕ್ಕಾಗಿ ಹಣ ಹಂಚುತ್ತಿದ್ದಾರೆ, ಆದರೆ ಅವರು ಸೊಸೈಟಿ ಸೆಕ್ರೆಟರಿಯಾಗಿದ್ದರು, ಅವರ ಬಳಿ ಅಷ್ಟೊಂದು ಹಣ ಎಲ್ಲಿಂದ ಬಂತು ಎಂದು ಪ್ರಶ್ನಿಸಿದ್ದಾರೆ. 

ಜೊತೆಗೆ ಬಿಜೆಪಿ ಯವರು ಜೆಡಿಎಸ್ ಪಕ್ಷದ ಅಭ್ಯರ್ಥಿಗೆ ಬಹಿರಂಗವಾಗಿ ಬೆಂಬಲ ನೀಡುತ್ತಿದ್ದಾರೆ, ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಡಮ್ಮಿ ಅಭ್ಯರ್ಥಿ ಕಣಕ್ಕಿಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!