ಬೆಂಗಳೂರು: ಕರ್ನಾಟಕ ವಿಧಾನ ಸಭೆ ಫಲಿತಾಂಶ ದಿನಕ್ಕಾಗಿ ಕಾಯುತ್ತಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ , ತಿರಸ್ಕಾರ ಅಥವಾ ಸ್ವೀಕಾರ ಯಾವುದನ್ನು ಒಪ್ಪಿಕೊಳ್ಳಲು ತಾವು ಸಿದ್ದರಾಗಿಲ್ಲ ಎಂದು ಹೇಳಿದ್ದಾರೆ.
ಎಕ್ಸಿಟ್ ಪೋಲ್ ಸಮೀಕ್ಷೆಯಲ್ಲಿ ಜೆಡಿಎಸ್ ಕಿಂಗ್ ಮೇಕರ್ ಆಗಲಿದೆ ಎಂಬ ವರದಿಗೆ ಪ್ರತಿಕ್ರಿಯಿಸಿರುವ ದೇವೇಗೌಡ ನಾನು ಯಾವುದನ್ನು ಒಪ್ಪಿಕೊಳ್ಳಲು ಸಿದ್ದವಾಗಿಲ್ಲ, ಮೇ 15ರ ವರೆಗೂ ಕಾಯೋಣ ಎಂದು ಹೇಳಿದ್ದಾರೆ.
ನಿನ್ನೆ ಮತ ಚಲಾಯಿಸಿದ ನಂತರ ಮಾತನಾಡಿದ್ದ ದೇವೇಗೌಡ ತಮ್ಮ ಪಕ್ಷ ಸರ್ಕಾರ ರಚಿಸುವ ನಿರೀಕ್ಷೆಯಲ್ಲಿದೆ ಎಂದು ಹೇಳಿದ್ದರು. ಸರ್ಕಾರ ರಚಿಸಲು 113 ಮ್ಯಾಜಿಕ್ ನಂಬರ್ ಬೇಕಾಗಿದೆ.