ಮಂಡ್ಯ: ರೈತ ಸಂಘದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಜೆಡಿಎಸ್ ಸಂಸದ ಸಿ.ಎಸ್.ಪುಟ್ಟರಾಜು ವಿರುದ್ದ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕ್ಯಾತನಹಳ್ಳಿ ಗ್ರಾಮದ ಕೆ.ಎನ್ ದೀಕ್ಷಿತ್ ಎಂಬವರು ಸಂಸದರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವಿಧಾನಸಭಾ ಚುನಾವಣೆಯ ಮತದಾನ ನಡೆಯುವ ಸಂದರ್ಭದಲ್ಲಿ ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಪರ ಚಿನಕುರುಳಿ ಗ್ರಾಮದಲ್ಲಿ ಪ್ರಚಾರ ನಡೆಸುವ ವೇಳೆ ಪುಟ್ಟರಾಜು ಕಪಾಳಕ್ಕೆ ಹೊಡೆದಿದ್ದರು ಎಂದು ದೀಕ್ಷಿತ್ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಸಂಸದ ಪುಟ್ಟರಾಜು ವಿರುದ್ದ ದೂರು ದಾಖಲಾಗಿದೆ.