ಲಕ್ನೋ : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವುದಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಭಿನಂದನೆ ಸಲ್ಲಿಸಿದ್ದಾರೆ.
ಬಿಜೆಪಿಗೆ ಬಹುಮತ ದೊರಕಿಸಿರುವ ಕರ್ನಾಟಕದ ಜನತೆ ಹಾಗೂ ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸುವುದಾಗಿ ಅವರು ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಅಭಿವೃದ್ದಿಪರ ಸಿದ್ದಾಂತದಿಂದ ಆಕರ್ಷಿತಗೊಂಡು ಜನತೆ ಬಿಜೆಪಿಗೆ ಬಹುಮತ ನೀಡಿದ್ದಾರೆ. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದಕ್ಷಿಣದಲ್ಲಿ ಪ್ರಾಬಲ್ಯ ಸಾಧಿಸಲು ನೆರವಾಗಲಿದೆ ಎಂದು ಹೇಳಿದ್ದಾರೆ.
ಚುನಾವಣೆಯಲ್ಲಿ ಬಿಜೆಪಿ 104, ಕಾಂಗ್ರೆಸ್ 78, ಜೆಡಿಎಸ್ 38 , ಹಾಗೂ ಪಕ್ಷೇತರರು 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.