ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ 104 ಸ್ಥಾನಗಳನ್ನು ಪಡೆದಿರುವ ಬಿಜೆಪಿ ಸರ್ಕಾರ ರಚನೆಯ ಹಕ್ಕು ಮಂಡಿಸಿದೆ.
ಸರ್ಕಾರ ರಚನೆ ಮಾಡುವಷ್ಟು ಶಾಸಕರ ಬಲ (112) ಇಲ್ಲವಾದರೂ ಅತಿ ಹೆಚ್ಚು ಶಾಸಕರ ಸಂಖ್ಯೆ ಹೊಂದಿರುವ ಏಕೈಕ ಪಕ್ಷ ಬಿಜೆಪಿಯಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹಾಗೂ ಅನಂತ್ ಕುಮಾರ್ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಅವಕಾಶ ಕೋರಿದ್ದಾರೆ.
ಇತ್ತ ಜೆಡಿಎಸ್-ಕಾಂಗ್ರೆಸ್ ಸಹ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಮುಂದಾಗಿದ್ದು, ರಾಜಭವನಕ್ಕೆ ತೆರಳಿ ಹೆಚ್ ಡಿ ಕುಮಾರಸ್ವಾಮಿ ಆಗಮಿಸಿ ಸರ್ಕಾರ ರಚನೆಗೆ ಅವಕಾಶ ಕೋರಲಿದ್ದಾರೆ. ಯಾರಿಗೆ ಸರ್ಕಾರ ರಚನೆಗೆ ಅವಕಾಶ ನೀಡಬೇಕೆಂಬುದು ರಾಜ್ಯಪಾಲರ ವಿವೇಚನೆಗೆ ಬಿಟ್ಟ ವಿಚಾರವಾಗಿದ್ದು, ರಾಜ್ಯಪಾಲರ ನಿರ್ಧಾರದ ಮೇಲೆ ಯಾರು ಸರ್ಕಾರ ರಚನೆ ಮಾಡುತ್ತಾರೆ ಎಂಬುದು ತಿಳಿಯಲಿದೆ.