ರಾಜಕೀಯ

ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Nagaraja AB

ಬೆಂಗಳೂರು : ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ 120 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿ ಮುಂಭಾಗ ಜಮಾಯಿಸಿದ್ದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ವಿವಿಧೆಡೆಗಳಿಂದ ಆಗಮಿಸಿದ್ದ ಸಾವಿರಾರು ಕಾರ್ಯಕರ್ತರು ಹೆಜ್ಜೆ ಹಾಕುತ್ತಾ ಬಿಜೆಪಿ, ಪ್ರಧಾನಿ ನರೇಂದ್ರಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಪರ ಜೈಕಾರ ಹಾಕಿ ಸಂಭ್ರಮಿಸಿದರು.

ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುತ್ತಿದ್ದಂತೆ ಪಕ್ಷದ ಬಾವುಟ ಎಲ್ಲೆಡೆ ರಾರಾಜಿಸಿತು. ಭಾರತ್ ಮಾತಾ ಕೀ ಜೈ ಘೋಷಣೆ ಮೊಳಗಿತು. ಸ್ವಂತ ಶಕ್ತಿಯ ಆಧಾರದ ಮೇಲೆ ಪಕ್ಷ ಅಧಿಕಾರ ಹಿಡಿಯಲಿದ್ದು, ಬಿ,ಎಸ್, ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು.

 ದೆಹಲಿಯಲ್ಲಿಯೂ ಪಕ್ಷದ ಪ್ರಧಾನ ಕಚೇರಿ ಮುಂಭಾಗ ಸಹ ಸಂಭ್ರಮಾಚರಣೆ ಮೇರೆ ಮೀರಿತ್ತು. ಬ್ಯಾನರ್ , ಪಕ್ಷದ ಧ್ವಜ  ಹಿಡಿದ ಕಾರ್ಯಕರ್ತರು ಗುಲಾಲ್ ಬಳಿದು ಸಂತಸ ವ್ಯಕ್ತಪಡಿಸಿದರು.

 ಬಿಜೆಪಿ ದಕ್ಷಿಣದಲ್ಲಿಯೂ ಮತ್ತೊಮ್ಮೆ ಖಾತೆ ತೆರೆಯುವ ಮೂಲಕ 2019ರ ಲೋಕಸಭಾ ಚುನಾವಣೆಗೂ ಬಾಗಿಲು ತೆರೆದಂತಾಯಿತು ಎಂದು ಕಾರ್ಯಕರ್ತರು ಹೇಳಿದರು

SCROLL FOR NEXT