ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ 
ರಾಜಕೀಯ

ಕಾಂಗ್ರೆಸ್ ಸ್ಥಾನ ಸ್ಪಷ್ಟಗೊಂಡ ಬಳಿಕ ಮೈತ್ರಿ ಕುರಿತು ನಿರ್ಧಾರ: ಮಲ್ಲಿಕಾರ್ಜುನ ಖರ್ಗೆ

ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಕಾಂಗ್ರೆಸ್ ಸ್ಥಾನ ಸ್ಪಷ್ಟಗೊಂಡ ಬಳಿಕ ಮೈತ್ರಿ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಮಂಗಳವಾರ ಹೇಳಿದ್ದಾರೆ...

ಬೆಂಗಳೂರು: ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಕಾಂಗ್ರೆಸ್ ಸ್ಥಾನ ಸ್ಪಷ್ಟಗೊಂಡ ಬಳಿಕ ಮೈತ್ರಿ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಮಂಗಳವಾರ ಹೇಳಿದ್ದಾರೆ. 
ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬೆಳಿಗ್ಗೆ 11-11.30ರ ಸುಮಾರಿಗೆ ಕಾಂಗ್ರೆಸ್ ಸ್ಥಾನ ಕುರಿತು ಸ್ಪಷ್ಟ ಮಾಹಿತಿಗಳು ತಿಳಿದುಬರಲಿದೆ. ಬಳಿಕ ಗುಲಾಮ್ ನಬಿ ಆಜಾದ್ ಮತ್ತು ಅಶೋಕ್ ಗೆಹ್ಲೋಟ್, ಜೆಡಿಎಸ್ ಜೊತೆಗಿನ ಮೈತ್ರಿ ಕುರಿತು ಚರ್ಚೆ ನಡೆಸುತ್ತೇವೆಂದು ಹೇಳಿದ್ದಾರೆ. 
ರಾಜ್ಯವಷ್ಟೇ ಅಲ್ಲದೆ, ಇಡೀ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಕುತೂಹಲ ಮೂಡಿಸಿರುವ ಕರ್ನಾಟಕ ವಿಧಾನಸಭೆ ಮತಎಣಿಕೆ ಪ್ರಕ್ರಿಯೆ ಮಂಗಳವಾರ ಆರಂಭಗೊಂಡಿದ್ದು, ಇಂದು ಮಧ್ಯಾಹ್ನ 1 ಗಂಟೆ ವೇಳೆ ಬಹುತೇಕ ಫಲಿತಾಂಶ ಬಹಿರಂಗಗೊಳ್ಳುವ ಸಾಧ್ಯತೆಗಳಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ