ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಸತತ ಆರನೇ ಬಾರಿ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರ ಫಲಿತಾಂಶವನ್ನು ಚುನಾವಣಾ ಆಯೋಗ ಮಂಗಳವಾರ ತಡೆ ಹಿಡಿದಿದೆ.
ಇವಿಎಂ ಹಾಗೂ ವಿವಿಪ್ಯಾಟ್ ನಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಫಲಿತಾಂಶಕ್ಕೆ ಚುನಾವಣಾ ಆಯೋಗ ತಡೆ ನೀಡಿದ್ದು, ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಜಗದೀಶ್ ಶೆಟ್ಟರ್ ಹಾಗೂ ಕಾಂಗ್ರೆಸ್ ನಿಂದ ಮಹೇಶ್ ನಾಲವಾಡ ಸ್ಪರ್ಧಿಸಿದ್ದರು.
ಇವಿಎಂ ಚಲಾವಣೆಯಾಗಿದ್ದಕ್ಕಿಂತ 207 ಹೆಚ್ಚು ಮತವನ್ನು ತೋರಿಸಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಹೇಶ್ ನಾಲವಾಡ ಅವರು ಫಲಿತಾಂಶವನ್ನು ತಡೆ ಹಿಡಿಯುವಂತೆ ಮನವಿ ಮಾಡಿದ್ದರು.