ನವದೆಹಲಿ: ಕರ್ನಾಟಕದಲ್ಲಿ ಸರ್ಕಾರ ರಚನೆಗೆ ಕಾಂಗ್ರೆಸ್ ನೀಡತ್ತಿರುವ ಬೇಷರತ್ ಬೆಂಬಲವನ್ನು ನಾವು ಒಪ್ಪಿಕೊಂಡಿದ್ದೇವೆ ಎಂದು ಜಿಡಿಎಸ್ ನಾಯಕ ಡ್ಯಾನಿಶ್ ಅಲಿ ಅವರು ಹೇಳಿದ್ದಾರೆ.
ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಬೇಕು ಎಂದು ಜೆಡಿಎಸ್ ಯಾವಾಗಲು ಹೇಳುತ್ತಿತ್ತು. ಆದರೆ ಈಗ ಬಂದಿರುವ ಫಲಿತಾಂಶದ ಪ್ರಕಾರ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್ ನಮಗೆ ಬೆಂಬಲ ನೀಡಿದೆ. ಅದನ್ನು ನಾವು ಒಪ್ಪಿಕೊಂಡಿದ್ದೇವೆ. ನಾವು ಇಬ್ಬರೂ ಜಂಟಿಯಾಗಿ 5.30ಕ್ಕೆ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು, ನಾನು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ಕುಮಾರಸ್ವಾಮಿ ಅವರ ಜೊತೆ ದೂರವಾಣಿ ಮೂಲಕ ಮಾತನಾಡಿದ್ದು, ಅವರು ನಮ್ಮ ಬೆಂಬಲವನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದರು.