ಸಿದ್ದರಾಮಯ್ಯ 
ರಾಜಕೀಯ

ರಾಜ್ಯಪಾಲರು ಸರ್ಕಾರ ರಚಿಸಲು ಬಿಜೆಪಿಗೆ ಅವಕಾಶ ನೀಡಿದರೆ ಪ್ರತಿಭಟನೆ ಮಾಡುತ್ತೇವೆ: ಸಿದ್ದರಾಮಯ್ಯ

ರಾಜ್ಯಪಾಲ ವಜುಭಾಯಿ ವಾಲಾ ಅವರು ಸರ್ಕಾರ ರಚಿಸಲು ಬಿಜೆಪಿಗೆ ಅವಕಾಶ ನೀಡಿದರೆ ಅವರ ವಿರುದ್ಧ...

ಬೆಂಗಳೂರು: ರಾಜ್ಯಪಾಲ ವಜುಭಾಯಿ ವಾಲಾ ಅವರು ಸರ್ಕಾರ ರಚಿಸಲು ಬಿಜೆಪಿಗೆ ಅವಕಾಶ ನೀಡಿದರೆ ಅವರ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ. 
ಇಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಶಾಸಕಾಂಗ ನಾಯಕನ ಆಯ್ಕೆ ಇನ್ನು ಅಂತಿಮವಾಗಿಲ್ಲ. ಸಂಜೆ ಮತ್ತೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಆಗ ಆಯ್ಕೆಯನ್ನು ಕಾಂಗ್ರೆಸ್ ನಾಯಕರು ಅಂತಿಮಗೊಳಿಸಲಿದ್ದಾರೆ ಎಂದರು. 
ಕಾಂಗ್ರೆಸ್ ಹಾಗೂ ಜೆಡಿಎಸ್‌ ಸರ್ಕಾರ ರಚನೆಗೆ ಸಂಖ್ಯಾ ಬಲವಿದೆ. ಈ ಆಧಾರದ ಮೇಲೆ ರಾಜ್ಯಪಾಲರು ಅವಕಾಶ ಕೊಡಬೇಕು. ಒಂದು ವೇಳೆ ಬಿಜೆಪಿಗೆ ಅವಕಾಶ ಕೊಟ್ಟರೆ ಸಂವಿಧಾನ‌ ವಿರೋಧಿಯಾಗುತ್ತೆ ಎಂದರು.
ಸರ್ಕಾರ ರಚಿಸಲು ಬಿಜೆಪಿಗೆ ಅವಕಾಶ ಕೊಟ್ಟರೆ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತೆ. ಸಂವಿಧಾನ ನಿಯಮಾವಳಿಯಂತೆ ನಡೆದುಕೊಳ್ಳಬೇಕು. ಸಂವಿಧಾನ ಬಾಹಿರವಾಗಿ ನಡೆದುಕೊಂಡರೆ ರಾಜ್ಯಪಾಲರ ಹುದ್ದೆಗೆ ಗೌರವ ಇರಲ್ಲ. ಬಿಜೆಪಿ ಕುದರೆ ವ್ಯಾಪರಕ್ಕೆ ಮುಂದಾಗಿದೆ. ಅದ್ರೆ ನಮ್ಮ ಶಾಸಕರು ಒಂದಾಗಿದ್ದೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ

ಸಮರ್ಥರಲ್ಲದಿದ್ದರೆ ಮೊದಲು ನೀವು ರಾಜಿನಾಮೆ ಕೊಡಿ: CJI ಸೂರ್ಯಕಾಂತ್ ರಾಜೀನಾಮೆಗೆ Congress ಒತ್ತಾಯ!

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ