ರಾಜಕೀಯ

ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನ ನೀಡದಿದ್ದರೆ ಕೋರ್ಟ್ ಮೊರೆ ಹೋಗಲು ಮುಂದಾದ ಕಾಂಗ್ರೆಸ್

Lingaraj Badiger
ನವದೆಹಲಿ: ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಗೆ ಆಹ್ವಾನ ನೀಡದಿದ್ದರೆ ಕಾಂಗ್ರೆಸ್ ಕೋರ್ಟ್ ಮೊರೆ ಹೋಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ರಾಜ್ಯಪಾಲರು ಸಂಪ್ರದಾಯ, ಸಂವಿಧಾನ ಮತ್ತು ಕಾನೂನಿನ ಪ್ರಕಾರ ಸಂಖ್ಯಾಬಲವನ್ನು ಹೊಂದಿರುವ ಕಾಂಗ್ರೆಸ್-ಜೆಡಿಎಸ್ ಗೆ ಸರ್ಕಾರ ರಚನೆಗೆ ಆಹ್ವಾನ ನೀಡದಿದ್ದರೆ ಕೋರ್ಟ್ ಮೊರೆ ಹೋಗಲು ಪಕ್ಷ ಸಿದ್ಧತೆ ನಡೆಸಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.
ಸಂಖ್ಯಾಬಲ ಮತ್ತು ಒಟ್ಟು ಮತ ಹಂಚಿಕೆ ಆಧಾರದ ಮೇಲೆ ನಾವು ಸರ್ಕಾರ ರಚನೆಯೆ ಹಕ್ಕು ಮಂಡಿಸಿದ್ದೇವೆ. ಒಂದು ವೇಳೆ ಆಹ್ವಾನ ನೀಡಿದೆ ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ನೀಡಿದರೆ ಕಾಂಗ್ರೆಸ್ ಎಲ್ಲಾ ಅವಕಾಶಗಳನ್ನು ಮುಕ್ತವಾಗಿರಿಸಿದೆ ಎಂದು ಕಾಂಗ್ರೆಸ್ ನಾಯಕ ರಂದೀಪ್ ಸುರ್ಜೇವಾಲ ಅವರು ಹೇಳಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ನಿನ್ನೆ ಪ್ರಕಟಗೊಂಡಿದ್ದು, ಮತ್ತೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. 38 ಸ್ಥಾನ ಪಡೆದು ಮೂರನೇ ಸ್ಥಾನದಲ್ಲಿರುವ ಜೆಡಿಎಸ್ ಗೆ 78 ಸ್ಥಾನ ಗೆದ್ದ ಕಾಂಗ್ರೆಸ್ ಬೆಂಬಲ ಸೂಚಿಸಿದೆ. ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಬಿಜೆಪಿ 104 ಸ್ಥಾನಗಳೊಂದಿಗೆ ಸರ್ಕಾರ ರಚನೆಗೆ ತೀವ್ರ ಸರ್ಕಸ್ ನಡೆಸುತ್ತಿದೆ.
SCROLL FOR NEXT