ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ 
ರಾಜಕೀಯ

ರಾಜ್ಯದ ಜನತೆ ಬಿಜೆಪಿ ಸರ್ಕಾರ ಬಯಸಿದ್ದಾರೆ, ಯಾರೇನೇ ಮಾಡಿದರೂ ಜನತೆ ನಮ್ಮೊಂದಿದ್ದಾರೆ: ಬಿಜೆಪಿ

ರಾಜ್ಯದ ಜನತೆ ಬಿಜೆಪಿ ಸರ್ಕಾರವನ್ನು ಬಯಸಿದ್ದಾರೆ, ರಾಜ್ಯದಲ್ಲಿ ಸರ್ಕಾರ ರಚನೆ ಮಾಡುತ್ತೇವೆಂದು ಬಿಜೆಪಿ ಬುಧವಾರ ಹೇಳಿದೆ...

ಬೆಂಗಳೂರು: ರಾಜ್ಯದ ಜನತೆ ಬಿಜೆಪಿ ಸರ್ಕಾರವನ್ನು ಬಯಸಿದ್ದಾರೆ, ರಾಜ್ಯದಲ್ಲಿ ಸರ್ಕಾರ ರಚನೆ ಮಾಡುತ್ತೇವೆಂದು ಬಿಜೆಪಿ ಬುಧವಾರ ಹೇಳಿದೆ. 
ಈ ಕುರಿತಂತೆ ಮಾತನಾಡಿರುವ ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು, ರಾಜ್ಯದ ಜನತೆ ಬಿಜೆಪಿ ಸರ್ಕಾರವನ್ನು ಬಯಸಿದ್ದಾರೆ. ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ. ಯಾರು ಯಾವುದೇ ರೀತಿಯ ಗೊಂದಲಗಳನ್ನು ಸೃಷ್ಟಿ ಮಾಡಿದರೂ, ಕರ್ನಾಟಕದ ಜನತೆ ನಮ್ಮೊಂದಿಗಿದ್ದಾರೆ. ಸಭೆ ಬಳಿಕ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇವೆ. ಹಿಂಬಾಗಿಲಿನಿಂದ ಕಾಂಗ್ರೆಸ್ ಮಾಡಿದ ಪ್ರವೇಶ ಸರಿಯಲ್ಲ ಎಂದು ಹೇಳಿದ್ದಾರೆ. 
ಇದರಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕರನ್ನು ಆಯ್ಕೆ ಮಾಡಲಾಗುತ್ತಿದೆ. ಇದಾದ ಬಳಿಕ ಕೂಡಲೇ ರಾಜಭವನಕ್ಕೆ ತೆರಳಲಾಗುತ್ತದೆ. ರಾಜ್ಯಪಾಲರ ಭೇಟಿ ವೇಳೆ ಬಹುಮತ ಸಾಬೀತುಪಡಿಸಲು ಬಿಜೆಪಿಗೆ ಮೊದಲು ಅವಕಾಶ ನೀಡುವಂತೆ ಮನವಿ ಮಾಡಿಕೊಳ್ಳಲಾಗುತ್ತದೆ. ಬಹುಮತ ಸಾಬೀತುಪಡಿಸಲು ನಾಳೆಯವರೆಗೂ ಕಾಲಾವಕಾಶ ನೀಡುವಂತೆ ಮನವಿ ಮಾಡಿಕೊಳ್ಳುತ್ತೇವೆಂದು ಹೇಳಿದ್ದಾರೆ. 
ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಮಾತನಾಡಿ, ನಮ್ಮದು ಏಕೈಕ ಅತೀದೊಡ್ಡ ಪಕ್ಷವಾಗಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ 6 ತಿಂಗಳ ಹಿಂದೆ ಹೇಗೆ ಹೊಡೆದಾಡುತ್ತಿದೆ ಎಂಬುದನ್ನು ನೀವು ನೋಡಿರಬಹುದು. ಇದೀಗ ಇಬ್ಬರು ಒಂದಾಗಿ, ಸರ್ಕಾರ ರಚಿಸಲು ಹೊರಟಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026 : ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಭಾರತದಲ್ಲಿ ಕಳೆದ 8 ತಿಂಗಳಲ್ಲಿ 254 ಹಿಂದೂಗಳು ಮುಸ್ಲಿಂ ಜಿಹಾದಿ ಹಿಂಸಾಚಾರಕ್ಕೆ ಬಲಿ: ಎಲ್ಲಿದೆ ನ್ಯಾಯ; VHP

ಭಾರತೀಯ ವಾಯುಪಡೆಗೆ ವರ್ಷಕ್ಕೆ 36-40 ಹೊಸ ಯುದ್ಧ ವಿಮಾನಗಳ ಅಗತ್ಯ: ವಾಯುಸೇನಾ ಮುಖ್ಯಸ್ಥ

ಆಸ್ಪತ್ರೆಗೆ ಭೇಟಿ ನೀಡಿ, ಫ್ಲೈದುಬೈ ಹೀರೋ ಸ್ಮಿತ್ ಮಚ್ಚಾರ್ ಹಣೆಗೆ ಮುತ್ತಿಟ್ಟ ದುಬೈ ಕ್ರೌನ್ ಪ್ರಿನ್ಸ್! ಹೇಳಿದ್ದೇನು?

BSFನಿಂದ ಇಬ್ಬರು ಪಾಕಿಗಳ ಹತ್ಯೆ: ಭಾರತೀಯ ರಾಯಭಾರಿ ಕರೆಸಿಕೊಂಡು, ಪ್ರತಿಭಟನೆ ದಾಖಲಿಸಿದ ಪಾಕಿಸ್ತಾನ!